ಕುಕ್ಕುಜಡ್ಕ: 1568 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

0

 

 

 

ಯುವ ಪೀಳಿಗೆ ದುಶ್ಚಟಕ್ಕೆ ಬಲಿಯಾದರೆ ದೇಶ ಅವನತಿಗೆ , ಪರಿವರ್ತನೆಗೆ ಅತ್ಯಂತ ದೊಡ್ಡ ಮಟ್ಟದ ಶಿಬಿರ ಇದಾಗಿದೆ : ಮೋಹನದಾಸ ಸ್ವಾಮೀಜಿ

ಸಾಮಾನ್ಯ ವ್ಯಕ್ತಿಗೂ ಗೌರವಯುತ ಬದುಕು ನಡೆಸಲು ಶಿಬಿರ ಪ್ರೇರಣೆಯಾಗಿದೆ:  ಅಂಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು,ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ,1568 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಕುಕ್ಕುಜಡ್ಕ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕ,ಗ್ರಾಮ ಪಂಚಾಯತ್ ಅಮರಮುಡ್ನೂರು, ಸುಳ್ಯ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ಘಟಕ ,ನವಜೀವನ ಸಮಿತಿ, ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಕುಕ್ಕುಜಡ್ಕ ಚೊಕ್ಕಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಮರ ಸಹಕಾರ ಸಭಾಭವನದಲ್ಲಿ ನಡೆದ 1568 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭವು ಆ.13 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎನ್.ಎ.ರಾಮಚಂದ್ರ ವಹಿಸಿದ್ದರು.
ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಯವರು ಆಶೀರ್ವಚನ ನೀಡಿದರು.


ಮುಖ್ಯ ಅಭ್ಯಾಗತರಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಮತ್ತು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ರವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ
ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ,ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ,
1568 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಯಂ.ಜಿ.ಸತ್ಯನಾರಾಯಣ, ಸಮಿತಿ ಅಧ್ಯಕ್ಷ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು, ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ರೈ ಕಳಂಜ, ಜನಜಾಗೃತಿ ವಲಯಾಧ್ಯಕ್ಷ ರಾಜಾರಾಮ ಭಟ್ ಬೆಟ್ಟ, ದ.ಕ.ಜಿಲ್ಲೆ 2 ರ ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಸುಳ್ಯ ತಾಲೂಕು ಯೋಜನಾಧಿಕಾರಿ ನಾಗೇಶ್ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಸ್ವಾಗತಿಸಿದರು.ಸುಂದರ ಶೇಣಿ ವಂದಿಸಿದರು.
ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಕಾರ್ಯಕ್ರಮ ನಿರೂಪಿಸಿದರು. ನವಜೀವನಕ್ಕೆ ಕಾಲಿರಿಸಿದ
ಶಿಬಿರಾರ್ಥಿ ರಕ್ಷಿತ್ ಶಿಬಿರದ ಮಹತ್ವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು.

ಆ.6 ರಿಂದ 13 ರ ವರೆಗೆ ಶಿಬಿರವು ಶಿಬಿರಾಧಿಕಾರಿ ದೇವಿಪ್ರಸಾದ್ ರವರ ಮಾರ್ಗದರ್ಶನದಲ್ಲಿ ನಡೆಯಿತು. ಸುಮಾರು 61 ಮಂದಿ ಶಿಬಿರಾರ್ಥಿಗಳು ಭಾಗವಹಿಸಿ ನವಜೀವನಕ್ಕೆ ಪಾದಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಕುಟುಂಬ ದಿನ‌ ಕಾರ್ಯಕ್ರಮವನ್ನು ವಿವೇಕ್ ವಿನ್ಸೆಂಟ್ ಪಾಯಸ್ ರವರು ನೆರವೇರಿಸಿದರು.
ನವಜೀವನ ಸಮಿತಿ ಸದಸ್ಯರ ಅನಿಸಿಕೆ,ಗುಂಪು ಸಲಹೆ,ಕೌಟುಂಬಿಕ ಸಲಹೆ, ಮಾಹಿತಿ ಮಾರ್ಗದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ,ಭಜನಾ ಕಾರ್ಯಕ್ರಮವು ಪ್ರತಿದಿನ ನಡೆಯಿತು.

ಸ್ಥಳೀಯ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸೊಸೈಟಿ ಅಧ್ಯಕ್ಷರು,
ನಿರ್ದೇಶಕರು, ಸಿಬ್ಬಂದಿ ವರ್ಗದವರು,
ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಶಿಬಿರದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು,
ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು.