ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ

0

 

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಮೃತಮಹೋತ್ಸವ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಸಹಕಾರಿ ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್ ನೆರವೇರಿಸಿದರು.


ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅಧ್ಯಕ್ಷರು ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.

ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್ ಕುತ್ಯಾಳ ಉಪಸ್ಥಿತರಿದ್ದು ಅಮೃತ ಮಹೋತ್ಸವ ಸ್ವಾತಂತ್ರ್ಯದ ಬಗ್ಗೆ ಮಾತನಾಡಿ ಶುಭ ಹಾರೈಸಿದರು.

ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಕಾರ್ಯಕ್ರಮ ನಿರೂಪಿಸಿದರು.

ಸಂಘದ ನಿರ್ದೇಶಕರು, ಸಿಬ್ಬಂದಿಗಳು, ಸದಸ್ಯರು, ಊರಿನವರು ಉಪಸ್ಥಿತರಿದ್ದರು.