ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

0

 

ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಕಾರ್ಯಕ್ರಮವು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಧ್ವಜಾರೋಹಣ ನೆರವೇರಿಸಿದರು.


ಬಾಚೋಡಿ ಶಾಲೆ ಸಮೀಪದಿಂದ ಸ್ವಾತಂತ್ರ್ಯ ನಡಿಗೆ ನಡೆಯಿತು.
ನಂತರ ಸಭಾ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ.ಟಿ.,ಶಾಲಾ ಮುಖ್ಯೋಪಾಧ್ಯಾಯ ಸಿದ್ಧರಾಜು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದು ಮಾತನಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ,ಊರವರು ಭಾಗವಹಿಸಿದ್ದರು.