ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಆಚರಣೆ

0

 

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗ್ರ ದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ದಿವ್ಯ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಅಶ್ವಿನಿ, ಗ್ರಾ.ಪಂ.ಮಾಜಿ ಸದಸ್ಯ ಜಯಪ್ರಕಾಶ್ ಮೊಗ್ರ, ಗ್ರಾಪಂ.ಸದಸ್ಯರಾದ ಶ್ರೀಮತಿ ಶಾರದ ಮುತ್ಲಾಜೆ, ವಸಂತ ಮೊಗ್ರ, ಶಾಲಾ ಮುಖ್ಯ ಗುರುಗಳಾದ ಪ್ರಮೋದ್ ಕೆ ಬಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಗುರುಗಳಾದ ಪ್ರಮೋದ್ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಅತಿಥಿಗಳು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರ ಆದರ್ಶ ವನ್ನು ತಿಳಿಸಿದರು. ಅತಿಥಿ ಉಪನ್ಯಾಸಕಿ ಕುಮಾರಿ ಆಶ್ರಿತಾ ಮಲ್ಕಾಜೆ ಮಾತನಾಡಿ ಅಮರ ಸುಳ್ಯ ದಂಗೆಯ ಬಗ್ಗೆ ಬೆಳಕು ಚೆಲ್ಲಿದರು.

ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಮತಿ ದಿವ್ಯ ರವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ವಿದ್ಯಾರ್ಥಿಗಳಿಗೆ ನೆನಪಿಸಿದರು. ಶಾಲಾ ಮಕ್ಕಳು ಭಾರತಾಂಬೆಯ ನೆನಪಿಗಾಗಿ ನೃತ್ಯದ ಮೂಲಕ ಮನರಂಜಿಸಿದರು. ವಿದ್ಯಾರ್ಥಿಗಳಿಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು ವಿದ್ಯಾರ್ಥಿಗಳೊಂದಿಗೆ ಊರಿನ ಜನತೆ ಉತ್ಸುಕರಾಗಿ ಪಾಲ್ಗೊಂಡರು.

ಕಾರ್ಯಕ್ರಮವನ್ನು ಶಿಕ್ಷಕಿ ಯಾದ ಶ್ರೀಮತಿ ರಮ್ಯ ಮೊಗ್ರಮೇಲೆಮನೆ ಅವರು ನಿರೂಪಿಸಿದರು, ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಕೆ ಇವರು ಸ್ವಾಗತಿಸಿದರು.ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ವಂದಿಸಿದರು.