ಸುಳ್ಯ ಸೈಂಟ್ ಜೋಸೆಫ್ ಶಾಲೆ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇದರ ವತಿಯಿಂದ ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಹಾಗೂ ಶ್ರೀಮತಿ ಪುಷ್ಟವೇಣಿಯವರು ತರಬೇತಿ ನೀಡಿದ್ದು , ಭಾನುಪ್ರಕಾಶ್ ರವರು ಮಾರ್ಗದರ್ಶನ ನೀಡಿದರು.