ಶ್ರೀಮತಿ ದೇವಕಿ ಕಣಜಾಲು ನಿಧನ

0

 

ಕನಕಮಜಲು ಗ್ರಾಮದ ಕಣಜಾಲು ದಿ. ಕೃಷ್ಣಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ದೇವಕಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸೆ.2ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ ಗೌಡ ಕಣಜಾಲು, ಗಂಗಾಧರ ಗೌಡ ಕಣಜಾಲು, ಪ್ರಾಂಶುಪಾಲ ದಾಮೋದರ ಗೌಡ ಕಣಜಾಲು, ಪುತ್ರಿಯರಾದ ಶ್ರೀಮತಿ ನಳಿನಾಕ್ಷಿ, ಶ್ರೀಮತಿ ನೀಲಾವತಿ, ಶ್ರೀಮತಿ ಹೇಮಲತಾ, ಶ್ರೀಮತಿ ಲೋಲಾಕ್ಷಿ , ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.