ಸೆ.10 : ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶ್ರೀ ಮಾತಾಜಿ ಸಭಾಂಗಣದ ಉದ್ಘಾಟನೆ

0

 

ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿ ಇದರ ಆಶ್ರಯದಲ್ಲಿ ಐವರ್ನಾಡು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಮಾತಾಜಿ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವು ಸೆ.10 ರಂದು ನಡೆಯಲಿದೆ.


ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕೆ ಬಂದರು ,ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಾಗೂ ನಾಮಫಲಕ ಅನಾವರಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಎ.ಒ.ಎಲ್.ಇ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ರವರು ನಾಮಫಲಕ ಅನಾವರಣ ಮಾಡಲಿದ್ದಾರೆ.
ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ, ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ,   ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ, ನಿವೃತ್ತ ಮುಖ್ಯೋಪಾಧ್ಯಾಯ ಎಂ.ವೀರಪ್ಪ ಗೌಡ ಭಾಗವಹಿಸಲಿದ್ದಾರೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ಮಡ್ತಿಲರವರು ತಿಳಿಸಿದ್ದಾರೆ.