ಸೆ.13 : ಜಯನಗರದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಕಬಡ್ಡಿ ಪಂದ್ಯಾಟ

0

 

ಸುಳ್ಯ ಜಯನಗರ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 13ರಂದು ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಕಬಡ್ಡಿ ಪಂದ್ಯಾಟ ನಡೆಯಲಿದೆ.


14 ವರ್ಷದ ವಯೋಮಿತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಆಯ್ಕೆ ಪಂದ್ಯಾಟ ಕೂಡ ಅಂದು ನಡೆಯಲಿದೆ.
ಬೆಳಿಗ್ಗೆ 9:30ಕ್ಕೆ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಸಂಜೆ 4:30ಕ್ಕೆ ಸಮಾರೋಪ ಸಮಾರಂಭಗೊಳ್ಳಲಿದ್ದು ಜಯಶೀಲರಾದ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದೆ.