ಬೆಳ್ಳಾರೆ : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಮಾಸಚಾರಣೆ, ಹೆಣ್ಣು ಮಗುವನ್ನು ರಕ್ಷಿಸಿ , ಹೆಣ್ಣು ಮಗುವನ್ನು ಓದಿಸಿ, ಮಾತೃ ವಂದನಾ ಸಪ್ತಾಹ ಕಾರ್ಯಕ್ರಮ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ,ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ ಮಾಸಚಾರಣೆ, ಹೆಣ್ಣು ಮಗುವನ್ನು ರಕ್ಷಿಸಿ , ಹೆಣ್ಣು ಮಗುವನ್ನು ಓದಿಸಿ, ಮಾತೃ ವಂದನಾ ಸಪ್ತಾಹ ಕಾರ್ಯಕ್ರಮವು ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

 

ಮುಖ್ಯ ಅತಿಥಿಗಳಾಗಿ ಭವಾನಿಶಂಕರ ಕಾರ್ಯನಿರ್ವಾಹಣಾಧಿಕಾರಿ ತಾಲೂಕು ಪಂಚಾಯತ್ ಸುಳ್ಯ, ಜೇಸಿ ಆರೀಫ್ ಬೆಳ್ಳಾರೆ ಪೂರ್ವಾಧ್ಯಕ್ಷರು ಜೇಸಿಐ ಬೆಳ್ಳಾರೆ ಇವರು ಉಪಸ್ಥಿತರಿದ್ದು ಮಾತನಾಡಿದರು. ಗೌರವ ಉಪಸ್ಥಿತಿಯಲ್ಲಿ ಬೆಳ್ಳಾರೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ಕೇಶವಮೂರ್ತಿ ಕಾವಿನಮೂಲೆ, ವಿರಾಟ್ ಪ್ರೆಂಡ್ಸ್ ಬೆಳ್ಳಾರೆ ಅಧ್ಯಕ್ಷರಾದ  ಮನೋಜ್ ಶೆಟ್ಟಿ, ಸ್ನೇಹಶ್ರೀ ಮಹಿಳಾ ಮಂಡಲ ಅಧ್ಯಕ್ಷರಾದ ಶ್ರೀಮತಿ ಕುಸುಮಾ ಕುರುಂಬುಡೇಲು, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಅನುಷಾ.ಡಿ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷರಾದ ಶ್ರೀಮತಿ ಸುಜಾತ ಜನಾರ್ಧನ ಚೀಮುಳ್ಳು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು .

ಮತ್ತು ಶ್ರೀಮತಿ ಉಷಾ ಪ್ರಸಾದ್ ರೈ ವಲಯ ಮೇಲ್ವಿಚಾರಕರು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಇವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ  ಸಂಜಯ್ ನೆಟ್ಟಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಹಿಳಾ ಮತ್ತು ಮಕ್ಕಳಾ ಕಲ್ಯಾಣ ಇಲಾಖೆ ಸುಳ್ಯ ಇವರು ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಪೋಷಕರು ಮತ್ತು ಸ್ತ್ರೀ ಶಕ್ತಿ ಸಂಘ ಗಳಿಗೆ ಪೌಷ್ಟಿಕ ಪಾನೀಯ, ಸೊಪ್ಪು ತರಕಾರಿಗಳು, ಮೆದು ಆಹಾರ ಮುಂತಾದ ವಿಭಾಗದ ಆಹಾರದ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಮತ್ತು ಅಂಗನವಾಡಿ ಮಕ್ಕಳಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ವಸಂತ್ ಉಲ್ಲಾಸ್ ಸ್ವಾಗತಿಸಿ , ಅಂಗನವಾಡಿ ಶಿಕ್ಷಕಿ ಇಂದಿರಾ ವಂದಿಸಿದರು. ಜ್ಞಾನದೀಪ ಮೊಂಟೆಸ್ಸಾರಿ ವಿದ್ಯಾರ್ಥಿ ಶಿಕ್ಷಕಿ ಆಫ್ರೀನಾ ಮತ್ತು ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ನಿಶ್ಮಿತಾ ಬೀಡು  ಕಾರ್ಯಕ್ರಮ ನಿರೂಪಿಸಿದರು. ಬೆಳ್ಳಾರೆ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳು, ಇಂಟರಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆ ಇವರು ಸಹಕರಿಸಿದರು.