ಐವರ್ನಾಡು ಸ.ಪ.ಪೂ.ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ಉದ್ಘಾಟನೆ

0

 

ನಾಲ್ಕು ಅಂಕಣಗಳಲ್ಲಿ ಖೋ ಖೋ ಪಂದ್ಯಾಟ

ದ.ಕ.ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ,ಸ.ಪ.ಪೂ.ಕಾಲೇಜು ಐವರ್ನಾಡು ಮತ್ತು ಸ.ಹಿ.ಪ್ರಾ.ಶಾಲೆ ಐವರ್ನಾಡು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದ ಉದ್ಘಾಟನೆಯು ಸೆ.09 ರಂದು ಐವರ್ನಾಡು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಿ.ಜಿ.ಎಸ್.ಎನ್.ಪ್ರಸಾದ್ ರವರು ದೀಪ ಬೆಳಗಿಸಿ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು.


ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ, ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ಸಂಘಟನಾ ಸಮಿತಿ ಅಧ್ಯಕ್ಷ ಎಸ್.ಎನ್.ಮನ್ಮಥ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್ವರ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ಯೋಗೀಶ ಕಲ್ಲಗದ್ದೆ, ಸತೀಶ ಜಬಳೆ,ಮಮತ ಉದ್ದಂಪಾಡಿ, ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಪಂಜ, ಎ.ಪಿ.ಎಂ.ಸಿ.ಮಾಜಿ ಉಪಾಧ್ಯಕ್ಷ ನವೀನ ಕುಮಾರ್ ಸಾರಕರೆ, ಸಹಕಾರಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ನಿರ್ದೇಶಕ ವಾಸುದೇವ ನಿಡುಬೆ, ಪಿ.ಡಿ.ಒ ಶ್ಯಾಮ್ ಪ್ರಸಾದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ, ಸತೀಶ ಮಡ್ತಿಲ, ಉಮೇಶ್ ಮಾಸ್ತರ್ ಪಲ್ಲತ್ತಡ್ಕ,ಎಸ್.ಡಿ.ಎಂ.ಸಿ ಅಧ್ಯಕ್ಷೆ ರೇಖಾ ಉದ್ದಂಪಾಡಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಾವತಿ ,ರಾಮಚಂದ್ರ ಪಲ್ಲತ್ತಡ್ಕ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಸ್ವಾಗತಿಸಿ, ಶಿಕ್ಷಕ ನಾರಾಯಣ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ರೀಮತಿ ವಿಜಯ ವಂದಿಸಿದರು.