ಐವರ್ನಾಡು ಸ. ಹಿ. ಪ್ರಾ. ಶಾಲಾ ಶ್ರೀ ಮಾತಾಜಿ ಸಭಾಂಗಣದ ಉದ್ಘಾಟನೆ

0

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ – ಹರೀಶ್ ಕುಮಾರ್

ನಾಯಕತ್ವ ಗುಣಕ್ಕೆ ಐವರ್ನಾಡು ಮಾದರಿ – ಡಾ.ರೇಣುಕಾಪ್ರಸಾದ್ ಕೆ.ವಿ

ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿ ಇದರ ಆಶ್ರಯದಲ್ಲಿ ಐವರ್ನಾಡು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಮಾತಾಜಿ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವು ಸೆ.10 ರಂದು ನಡೆಯಿತು.

ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಎ.ಒ.ಎಲ್.ಇ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ರವರು ಸಭಾಂಗಣವನ್ನು ಉದ್ಘಾಟಿಸಿ, ನಾಮಫಲಕ ಅನಾವರಣ ಮಾಡಿದರು.

ಐವರ್ನಾಡು ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ನಾಮಫಲಕ ಅನಾವರಣ ಮಾಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ವಹಿಸಿ ಮಾತನಾಡಿದರು.

ಸನ್ಮಾನ
ಸಭಾಂಗಣಕ್ಕೆ ರೂ.3 ಲಕ್ಷ ಅನುದಾನ ಒದಗಿಸಿದ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ವೀರಪ್ಪ ಗೌಡ ದಂಪತಿಗಳು 3 ಲಕ್ಷ ದೇಣಿಗೆ ನೀಡಿದ್ದು ಇವರನ್ನು ಶಾಲು ಹೊದಿಸಿ ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಐವರ್ನಾಡು ಜೂನಿಯರ್ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನಿಯಾದ ಐವರ್ನಾಡು ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳನ್ನು ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಮಾಲತಿಯವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ, ಕೆ.ಪಿ.ಸಿ.ಸಿ.ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ, ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಶ್ರೀಮತಿ ರಾಜೀವಿ ಉದ್ದಂಪಾಡಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಾವತಿ, ಬೆಳ್ಯಪ್ಪ ಗೌಡ ಮಡ್ತಿಲ ಉಪಸ್ಥಿತರಿದ್ದರು.
ಶತಮಾನೋತ್ಸವ ಸಮಿತಿ ಅಧ್ಯಕ್ಷ ದಿನೇಶ್ ಮಡ್ತಿಲ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕಿ ಶ್ರೀಮತಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಾವತಿ ವಂದಿಸಿದರು.