ಕನಕಮಜಲು ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆ

0

 

ಸಂಘದಿಂದ 148.21 ಕೋಟಿ ವಾರ್ಷಿಕ ವ್ಯವಹಾರ 50,16,208.93 ನಿವ್ವಳ ಲಾಭ

ಸದಸ್ಯರುಗಳಿಗೆ ಶೇ.9 ಡಿವಿಡೆಂಡ್ ಘೋಷಣೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಂಘದ 2021-22ನೇ ಸಾಲಿನ ಆರ್ಥಿಕ ವರ್ಷದ ವಾರ್ಷಿಕ ಮಹಾಸಭೆಯು ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅವರ ಅಧ್ಯಕ್ಷತೆಯಲ್ಲಿ ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಸೆ.11ರಂದು ಜರುಗಿತು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರು ಸಂಘದ 2021 – 22ನೇ ಸಾಲಿನ ಆಡಳಿತ ಮಂಡಳಿಯ ವಾರ್ಷಿಕ ವರದಿಯನ್ನು ಮಂಡಿಸಿದರು.
ಸಂಘವು 2021 -22ನೇ ಸಾಲಿನ ಆರ್ಥಿಕ ವರ್ಷದಲ್ಲಿ 148.21 ಕೋಟಿ ವ್ಯಹಹಾರ ನಡೆಸಿ, 50,16,208.93 ನಿವ್ವಳ ಲಾಭ ಹೊಂದಿದ್ದು, ಸದಸ್ಯರುಗಳಿಗೆ ಶೇ.9 ಡಿವಿಡೆಂಡ್ ನೀಡಲಾಗಿದೆ ಎಂದು ಅಧ್ಯಕ್ಷರಾದ ಡಾ. ಗೋಪಾಲಕೃಷ್ಣ ಭಟ್ ಅವರು ಘೋಷಿಸಿದರು.
ಈ ಬಾರಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ವಿತರಣೆ ಕಾರ್ಯಕ್ರಮವು ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ವಿತರಿಸಲು ನಿರ್ಧರಿಸಲಾಗಿದೆ ಹಾಗೂ ಅಕ್ಟೋಬರ್ 16ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ, ಸ್ಮರಣ ಸಂಚಿಕೆಯ ಬಗ್ಗೆ ಸಭೆಯಲ್ಲಿ ಅಧ್ಯಕ್ಷರು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ನಿರ್ದೇಶಕರುಗಳಾದ ಕರುಣಾಕರ ರೈ ಕುಕ್ಕಂದೂರು, ಸುಖೇಶ್ ಅಡ್ಕಾರುಪದವು, ಗಣೇಶ್ ಅಂಬಾಡಿಮೂಲೆ, ಶೇಷಪ್ಪ ನಾಯ್ಕ ಕಜೆಗದ್ದೆ, ಸೀತಾರಾಮ ಮಠ, ಮಹೇಶ್ವರ ಕಾರಿಂಜ, ಶ್ರೀಮತಿ ಭಾರತಿ ಕಜೆಗದ್ದೆ, ಶ್ರೀಮತಿ ಸಾವಿತ್ರಿ ಕಾರಿಂಜ, ಶ್ರೀಮತಿ ಪ್ರೇಮಲತಾ ಪಲ್ಲತ್ತಡ್ಕ, ಸಹಕಾರಿ ಸಂಘದ ಕಾನೂನು ಸಲಹೆಗಾರ ದೇವಿಪ್ರಸಾದ್ ಆಳ್ವ, ಆಂತರಿಕ ಲೆಕ್ಕಪರಿಶೋಧಕ ಕುಶಾಲಪ್ಪ ಗೌಡ ಕಣಜಾಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು , ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಹಕಾರಿ ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ ಅವರು ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ವಂದಿಸಿದರು.