ಜಯನಗರ: ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

0

 

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಯನಗರ ಇದರ ಆಶಯದಲ್ಲಿ ಸುಳ್ಯ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಕಬಡ್ಡಿ ಪಂದ್ಯಾಟ ಸೆಪ್ಟೆಂಬರ್ 13ರಂದು ಜಯನಗರ ಶಾಲಾ ಮೈದಾನದಲ್ಲಿ ನಡೆಯಿತು.
ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು.

ಸ್ಥಳೀಯ ನಗರ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಭಟ್ ಕೊಡೆಂಕೇರಿ ಆಟದ ಮೈದಾನದ ಅಂಕಣವನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ಶ್ರೀಮತಿ ಶೀತಲ್,ಸ್ಥಳೀಯ ನಗರ ಪಂಚಾಯತ್ ಸದಸ್ಯರುಗಳಾದ ಶಿಲ್ಪಾ ಸುದೇವ್, ರೋಹಿತ್ ಕೋಯಿಂಗೋಡಿ, ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷ ಮುದ್ದಪ್ಪ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ,ಕೊರಂಬಡ್ಕ ಆದಿ ಮೊಗೇರ್ಕಳ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕೇಶವ ಮಾಸ್ತರ್ ಹೊಸಗದ್ದೆ, ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಅಂಬಾಬಾಯಿ, ವಿಕ್ರಮ ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್,ದೈಹಿಕ ಶಿಕ್ಷಕರ ಶಿಕ್ಷಣಾಧಿಕಾರಿ ಸೂಫಿ ಮಾಸ್ಟರ್, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಕ ತೀರ್ಥರಾಮ ಅಡ್ಕಬಳೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯ ತಾಲೂಕಿನ ವಿವಿಧ ಶಾಲೆಗಳ 29 ಬಾಲಕರ ತಂಡಗಳು , 9 ಬಾಲಕಿಯರ ತಂಡಗಳು ಭಾಗವಹಿಸಿದ್ದವು.
ಈ ಪಂದ್ಯಾಟದಲ್ಲಿ ಬಾಲಕರ ತಂಡದಿಂದ ಪಂಜ ಮುರಾರ್ಜಿ ದೇಸಾಯಿ ರೆಸಿಡೆನ್ಸಿಯಲ್ ಸ್ಕೂಲ್ , ಬಾಲಕಿಯರ ವಿಭಾಗದಿಂದ ಎಲಿಮಲೆ ಜ್ಞಾನ ದೀಪ ಶಾಲೆ ಪ್ರಥಮ ಸ್ಥಾನ ಪಡೆದು ಟ್ರೋಫಿ ತಮ್ಮದಾಗಿಸಿಕೊಂಡರೆ
ದ್ವಿತೀಯ ಸ್ಥಾನದ ಟ್ರೋಫಿಯನ್ನು ಬಾಲಕರ ವಿಭಾಗದಿಂದ ಸುಬ್ರಹ್ಮಣ್ಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ವಿಭಾಗದಿಂದ ಗುತ್ತಿಗಾರು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಟ್ರೋಫಿಯನ್ನು ಪಡೆದುಕೊಂಡಿತು.
ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ ವಹಿಸಿದ್ದರು.


ಪಂದ್ಯಾಟಕ್ಕೆ ಟ್ರೋಫಿ ಮತ್ತು ಫೈನಲ್ ಪಂದ್ಯಾಟದಲ್ಲಿ ಭಾಗವಹಿಸಿದ ತಂಡದ ಆಟಗಾರರಿಗೆ ವೈಯುಕ್ತಿಕ ಸ್ಮರಣಿಕೆಯನ್ನು ಪ್ರಾಯೋಜಕರಾಗಿ ನೀಡಿ ಸಹಕರಿಸಿದ ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷ ಎಚ್ ಎಂ ನಂದಕುಮಾರ್ ಮಡಿಕೇರಿ ರವರು ಬಹುಮಾನ ವಿತರಣೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್, ನಗರ ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಭಟ್ ಕೊಡಂಕೇರಿ, ಶಿಲ್ಪಾಸುದೇವ್, ರೋಹಿತ್ ಕೋಯಿಂಗೋಡಿ, ರಿಯಾಜ್ ಕಟ್ಟೆಕ್ಕಾರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲ್ಲಿ, ಶಿಕ್ಷಕ ಸೂಫಿ ಮಾಸ್ಟರ್, ಶಶಿಧರ ಎಂ ಜೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ, ಕೊರಂಬಡ್ಕ ಆದಿ ಮೊಗೇರ್ಕಳ ದೈವಸ್ಥಾನ ಸಮಿತಿ ಕಾರ್ಯದರ್ಶಿ ಸುಂದರ ಕುತ್ಪಾಜೆ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಮುದ್ದಪ್ಪ, ಸುದ್ದಿ ಬಿಡುಗಡೆ ಪತ್ರಿಕೆ ಕಚೇರಿಯ ವ್ಯವಸ್ಥಾಪಕ ಯಶ್ವಿತ್ ಕಾಳಮನೆ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 2022 ನೇ ಸಾಲಿನ ರೋಟರಿ ನ್ಯಾಷನ್ ಬಿಲ್ಡರ್ ಪ್ರಶಸ್ತಿ ವಿಜೇತ ಜಯನಗರ ಶಾಲಾ ದೈಹಿಕ ಶಿಕ್ಷಕ ತೀರ್ಥರಾಮ ಅಡ್ಕಬಳೆ ರವರನ್ನು ಶಾಲಾ ಎಸ್ಡಿಎಂಸಿ ಮತ್ತು ಶಿಕ್ಷಕ ವೃಂದದ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಪಂದ್ಯಕೂಟಕ್ಕೆ ತಾಲೂಕಿನ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು,ಜಯನಗರ ಶಾಲಾ ಶಿಕ್ಷಕ ವೃಂದದವರು, ಎಸ್‌ಡಿಎಂಸಿ ಸರ್ವ ಸದಸ್ಯರು, ಪೋಷಕ ವೃಂದ, ಹಳೆ ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರಿನ ದಾನಿಗಳು, ಸ್ಥಳೀಯ ನಿವಾಸಿಗಳು ಸಹಕಾರ ನೀಡಿದರು.
ಎಸ್ ಡಿ ಎಂ ಸಿ ಸದಸ್ಯ ಹಸೈನಾರ್ ಜಯನಗರ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ತೀರ್ಥರಾಮ ಅಡ್ಕಬಳೆ ವಂದಿಸಿದರು.