ಪಂಜ ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ಜಮಾಬಂದಿ

0

 

ಪಂಜ ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ವು ಸೆ.16 ರಂದು ಗ್ರಾಮ ಪಂಚಾಯತದ ಸಭಾಂಗಣದಲ್ಲಿ ಜರಗಿತು.

ನೋಡೆಲ್ ಅಧಿಕಾರಿಯಾಗಿ ಮಂಗಳೂರು ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಾಧಿಕಾರಿ ಸುಬ್ಬಯ್ಯ ಪಾಲ್ಗೊಂಡಿದ್ದರು. ಗ್ರಾಮ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್, ಕಾರ್ಯದರ್ಶಿ ಕೆ. ಪದ್ಮಯ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ದ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು.