ಹೆಣ್ಣು ಮಕ್ಕಳ ಆರೋಗ್ಯ ಮಾಹಿತಿ ಶಿಬಿರ

0

ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಗಾಗಿ ಸುಳ್ಯ ರೋಟರಿ ಕ್ಲಬ್ ವತಿಯಿಂದ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಮಾಹಿತಿ ಶಿಬಿರವನ್ನು ಆಯೋಜಿಸಲಾಗಿತ್ತು. ಸುಳ್ಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ , ಆರೋಗ್ಯ ಮಾಹಿತಿ ಪಡೆದು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಕಲಿಕೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗದ ವೈದ್ಯರಾದ ಡಾ. ಗೀತಾ ದೊಪ್ಪರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹದಿಹರೆಯದ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಎದುರಿಸುವ ಮಾನಸಿಕ ಒತ್ತಡ, ಆರೋಗ್ಯ ಸಮಸ್ಯೆಗಳನ್ನು ವಿವರಿಸಿ ಅದರಿಂದ ಹೊರಬರುವ ಬಗ್ಗೆ ತರಬೇತಿ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಚಂದ್ರಶೇಖರ ಪೇರಾಲ್ ಅಧ್ಯಕ್ಷತೆ ವಹಿಸಿದ್ದರು. ನಿಲಯ ಮೇಲ್ವಿಚಾರಕರಾದ ಶ್ರೀಮತಿ ಆರ್ಶಿಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಮಧುರಾ ಎಂ. ಆರ್. ವಂದಿಸಿದರು.