ಐವರ್ನಾಡು ಗ್ರಾಮ ಪಂಚಾಯತ್

0

 

ಬೃಹತ್ ಸ್ವಚ್ಛತಾ ಅಭಿಯಾನ ,ಗಾಂಧಿ ಜಯಂತಿ ಆಚರಣೆ

ಸುದ್ದಿ ಜನಾಂದೋಲನದ ಲಂಚ,ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಪ್ರತಿಜ್ಞೆ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅ.02 ರಂದು ಗಾಂಧಿ ಜಯಂತಿಯ ಅಂಗವಾಗಿ ಹಾಗೂ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದ ಭಾಗವಾಗಿ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯುತ್ತಿರುವ ಸ್ವಚ್ಚತಾ ಶ್ರಮದಾನವು ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ ವತಿಯಿಂದ ಬೃಹತ್ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮ ನಡೆಯಿತು.

ನಂತರ ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮದೊಂದಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಗ್ರಾಮ ನೈರ್ಮಲ್ಯ ಯೋಜನೆ ಮಂಜೂರಾತಿಯ ಹಾಗೂ ನರೇಗಾ ಯೋಜನೆಯ ವಿಶೇಷ ಗ್ರಾಮ ಸಭೆ ನಡೆಸಲಾಯಿತು.
ಹಾಗೂ ಈ ಗ್ರಾಮ ಸಭೆಯಲ್ಲಿ ಸುದ್ದಿ ಪತ್ರಿಕೆಯವರು ನಡೆಸುತ್ತಿರುವ ಜನಾಂದೋಲನದ ಲಂಚ ಭ್ರಷ್ಠಾಚಾರ ನಿರ್ಮೂಲನೆಯ ಪ್ರತಿಜ್ಞೆ ಮಾಡಲಾಯಿತು.


ಪ್ರತಿಜ್ಞೆಯನ್ನು ಗ್ರಾಮ ಪಂಚಾಯತ್ ಸಿಬ್ಬಂದಿಯಾದ ಪುರುಷೋತ್ತಮ ಗೌಡರು ಭೋಧಿಸಿದರು .
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಪವಿತ್ರಮಜಲು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್,ಎನ್ ಮನ್ಮಥ , ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ , ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜೆ.ಟಿ.ವೆಂಕಪ್ಪ ಗೌಡ,ನಟರಾಜ ಸಿ-ಕೂಪ್ ಅಧ್ಯಕ್ಷರು ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ ಹಾಗೂ ಗ್ರಾಮ ಪಂಚಾಯತ್ ನ ಸದಸ್ಯರು,ಸಹಕಾರಿ ಸಂಘದ ನಿರ್ದೇಶಕರು ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.
ಗ್ರಾಮ ಪಂಚಾಯತ್ ಸಿಬ್ಬಂದಿಯಾದ ಕುಮಾರ ಕಟ್ಟತ್ತಾರು ಸ್ವಾಗತಿಸಿ, ಮಂಜುಶ್ರೀ ಗೆಳೆಯರ ಬಳಗದ ಕಾರ್ಯದರ್ಶಿಯಾದ ಜಯಪ್ರಕಾಶ ಕಜೆತ್ತಡ್ಕ ರವರು ವಂದಿಸಿದರು.