ಜಾಲ್ಸೂರು: ಗಾಂಧಿಜಯಂತಿ ಆಚರಣೆ ಹಾಗೂ ನರೇಗಾ ಯೋಜನೆಯ ವಿಶೇಷ ಗ್ರಾಮಸಭೆ

0

 

ಸಂಜೀವಿನಿ ಒಕ್ಕೂಟದ ವತಿಯಿಂದ ನಿರ್ಮಾಣಗೊಂಡ ನರ್ಸರಿಯ ಉದ್ಘಾಟನೆ

ನರೇಗ ಯೋಜನೆ 2023-24ನೇ ಸಾಲಿನ ಕಾಮಗಾರಿ ಗುಚ್ಛ ತಯಾರಿ ಹಾಗೂ ಗಾಂಧಿ ಜಯಂತಿ ಆಚರಣೆ, ಸ್ವಚ್ಛ ಹಿ ಸೇವಾ ಸ್ವಚ್ಛತೆಯೇ ಸೇವೆ ವಿಶೇಷ ಗ್ರಾಮ ಸಭೆಯು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಅ.2ರಂದು ಜರುಗಿತು.

ಗ್ರಾ.ಪಂ‌. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ. ಅವರು ಸ್ವಚ್ಛತೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ವತಿಯಿಂದ ಗ್ರಾ.ಪಂ. ಬಳಿ ನಿರ್ಮಿಸಲಾದ ನರ್ಸರಿಯಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಅವರು ಬೀಜ ಬಿತ್ತನೆಯ ಮೂಲಕ ಉದ್ಘಾಟಿಸಿದರು. ಗ್ರಾಮದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧದ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಪೇಟೆಯಲ್ಲಿರುವ ಅಂಗಡಿಗಳಿಂದ ಶುಲ್ಕ ಸಂಗ್ರಹಣೆ , ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಹಾಗೂ ಕಸ ಎಸೆದವರ ವಿರುದ್ದ ದಂಡ ವಿಧಿಸುವ ಕುರಿತು ಸಭೆಯಲ್ಲಿ ಚರ್ಚಿಸಿ ‌ನಿರ್ಣಯ ಕೈಗೊಳ್ಳಲಾಯಿತು. ಇದೇ ವೇಳೆ ನರೇಗಾ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ಶಿವಪ್ರಸಾದ್ ಕುಕ್ಕಂದೂರು, ಈಶ್ವರ ನಾಯ್ಕ ಕುಕ್ಕಂದೂರು, ಶ್ರೀಮತಿ ಅಂಬಿಕಾ ಕುಕ್ಕಂದೂರು, ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಮುಜೀಬ್ ಪೈಚಾರು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ಸಂಧ್ಯಾ ವಾಗ್ಲೆ ಅಡ್ಕಾರು, ವಿಜಯ ಅಡ್ಕಾರು, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಅಬ್ದುಲ್ ಮಜೀದ್ ನಡುವಡ್ಕ, ಎನ್.ಎಂ. ಸತೀಶ್ ಕೆಮನಬಳ್ಳಿ , ಪಿ.ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ ಸೇರಿದಂತೆ ಗ್ರಾಮದ ನರೇಗಾ ಯೋಜನೆಯ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.