ಬೆಳ್ಳಾರೆ: ವಿದ್ಯಾರ್ಥಿಗಳಿಂದ ಗಾಂಧೀ ನಡಿಗೆಯೊಂದಿಗೆ ಪಂಚಾಯತ್ ದರ್ಶನ ಕಾರ್ಯಕ್ರಮ

0

 

ಲಂಚ,ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ

ಗಾಂಧೀ ಜಯಂತಿ ಬೆಳ್ಳಾರೆ ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಬೆಳ್ಳಾರೆಯಿಂದ ಪೆರುವಾಜೆವರೆಗೆ ಗಾಂಧೀ ನಡಿಗೆಯ ಮುಲಕ ಪಂಚಾಯತ್ ದರ್ಶನ ಕಾರ್ಯಕ್ರಮ ಹಾಗು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ವಿದ್ಯಾರ್ಥಿಗಳು ಸೇರಿದಂತೆ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರು ನಡಿಗೆಯ ಮೂಲಕ ಪೆರುವಾಜೆ ಗ್ರಾಮ ಪಂಚಾಯತ್ ಗೆ ತೆರಳಿ ಪಂಚಾಯತ್ ನ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಗಾಂಧೀ ಕನಸಿನ ಗ್ರಾಮ ಸ್ವರಾಜ್ಯದ ಪರಿಕೆಲ್ಪನೆಯನ್ನು ಸಾಕಾರಗಳಿಸಲು ತಮ್ಮ ಗ್ರಾಮ ಪಂಚಾಯತ್ ನೊಂದಿಗೆ ಸಹಕರಿಸಬೇಕು ಎಂದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಪಂಚಾಯತ್ ನ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಚಂದನ್, ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಭಾವೈಕ್ಯ ಯುವಕ ಮಂಡಲದ ಗೌರವಾಧ್ಯಕ್ಷ ಜಯಪ್ರಕಾಶ್, ಸಂಸ್ಥೆಯ ಉಪನ್ಯಾಸಕರು ಹಾಗು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸ್ವಚ್ಛತೆ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯ ಬಗ್ಗೆ ಹಾಗು ಲಂಚ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು. ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.