ರೋಟರಿ ಆಂಗ್ಲ ಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಜಯಂತಿ ಆಚರಣೆ

0

 

ರೋಟರಿ ಆಂಗ್ಲಮಾದ್ಯಮ ವಿದ್ಯಾಸಂಸ್ಥೆಯಲ್ಲಿ ಅ.2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನೋತ್ಸವವನ್ನು ಆಚರಿಸಲಾಯಿತು.
ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರದ ಮುಂದೆ ದೀಪ ಪ್ರಜ್ವಲಿಸಿ , ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ವಿದ್ಯಾಸಂಸ್ಥೆಯ ರಾಣಿ ಅಬ್ಬಕ್ಕ ಗೈಡ್ಸ್ ಹಾಗೂ ಭಗತ್ ಸಿಂಗ್ ಸ್ಕೌಟ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಹಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾಗಿರುವ ರೋ ಚಂದ್ರಶೇಖರ್ ಪೇರಾಲ್ ರವರು ವಹಿಸಿದ್ದರು. ಶಾಲಾ ಸಂಚಾಲಕರಾದ ರೊ.ಗಿರಿಜಾಶಂಕರ್ ತುದಿ ಯಡ್ಕ ದಿನದ ಮಹತ್ವವನ್ನು ವರ್ಣಿಸಿದರು .
ವಿದ್ಯಾರ್ಥಿನಿ ಹಿಮಾನಿ. ಎ . ಎಸ್.ಗಾಂಧಿಜಿಯವರ ಬಗ್ಗೆ ಮಾತನಾಡಿದರೆ ಹತ್ತನೇ ತರಗತಿಯ ವಿದ್ಯಾರ್ಥಿ ಅನಂತ ಕೃಷ್ಣ ಶಾಸ್ತ್ರೀಜಿಯವರ ಕರ್ತವ್ಯನಿಷ್ಠೆ , ಪ್ರಾಮಾಣಿಕತೆಯನ್ನು ಕೊಂಡಾಡಿದರು.


ರೋಟರಿ ಚಾರಿಟೇಬಲ್ ಟ್ರಸ್ಟ್ ನ ಕೋಶಾಧಿಕಾರಿ ರೊ.ಆನಂದ ಖಂಡಿಗ, ಕಾರ್ಯದರ್ಶಿ ರೊ . ಮಧುರಾ, ರೊ.ಪ್ರಭಾಕರನ್ ನಾಯರ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಸ್ವಚ್ಛ ಪರಿಸರ ಕುರಿತು ಪ್ರಮಾಣ ವಚನ ಬೋಧಿಸಿದರು . ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀ ಮತಿ ವೀಣಾ ಶೇಡಿಕಜೆ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ನಳಿನಾಕ್ಷಿ, ಕಲ್ಮಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.