ಬಳ್ಪ: ಅಕ್ರಮ ಮದ್ಯ ಮಾರಾಟ ತಡೆ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಗ್ರಾಮಸ್ಥರ‌ ಸಭೆ

0

 

ಬಳ್ಪ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಕ್ರಮ‌ ಮದ್ಯ ಮಾರಾಟವಾಗುತ್ತಿದೆ. ಈ ಬಗ್ಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂಬ ಆರೋಪ ಕಳೆದ ಬಳ್ಪ ಗ್ರಾಮ ಸಭೆಯಲ್ಲಿ ಪ್ರಸ್ತಾಪವಾಗಿತ್ತು. ಇದರ ಫಲವಾಗಿ ಅ. 4ರಂದು ಬಳ್ಪ ಗ್ರಾಮದ ಕೊನ್ನಡ್ಕ ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ
ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದ ವಠಾರದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರು ಯಾರೆಂದು ಗೊತ್ತಿದ್ದರೂ ಅಬಕಾರಿ ಇಲಾಖೆಯಾಗಲೀ, ಪೊಲೀಸ್ ಇಲಾಖೆಯಾಗಲೀ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರಲ್ಲದೆ ಇಲಾಖಾಧಿಕಾರಿಗಳಿಗೆ ಮನವಿ ನೀಡಿದರು. ಇಲಾಖಾಧಿಕಾರಿಗಳು ಹೊಸತಾಗಿ ವರ್ಗಾವಣೆಗೊಂಡು ಆಗಮಿಸಿದ್ದೇವೆ. ಮುಂದಕ್ಕೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಮಂಜುನಾಥ ಮತ್ತು ಸಿಬ್ಬಂದಿ ವರ್ಗ, ಅಬಕಾರಿ ಇಲಾಖೆಯ ಸಬ್ಇನ್ಸಪೆಕ್ಟರ್ ಜಯಾನಂದ
ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಮನವಿ ಸ್ವೀಕರಿಸಿದರು. ಬಳ್ಪ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ‌ ಸೂಂತಾರು ಮತ್ತು ಸದಸ್ಯರು, ದೈವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು. ಗ್ರಾ.ಪಂ. ಸದಸ್ಯ, ನ್ಯಾಯವಾದಿ ಹರ್ಷಿತ್ ಕಾರ್ಜ ಸ್ವಾಗತಿಸಿ, ಕಿರಣ್ ಕೊನ್ನಡ್ಕ ವಂದಿಸಿದರು. ಶ್ರೇಯಸ್ ಕೊನ್ನಡ್ಕ ಕಾರ್ಯಕ್ರಮ ನಿರೂಪಿಸಿದರು.