ಗಾಂಧಿನಗರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಆರಂಭ

Advt_Headding_Middle
Advt_Headding_Middle
Advt_Headding_Middle

ಗಾಂಧಿನಗರ ಪದವಿ ಪೂರ್ವ ಕಾಲೇಜಿನಲ್ಲಿ ಈ ವರ್ಷದಿಂದ ವಾಣಿಜ್ಯ ವಿಭಾಗ ತೆರೆಯಲು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಆದೇಶ ಮಾಡಿದ್ದಾರೆ ಎಂದು ಕಾಲೇಜಿನ ಅಭಿವೃದ್ದಿ ಸಮಿತಿ ಕೋಶಾಧಿಕಾರಿ ಎಂ.ವೆಂಕಪ್ಪ ಗೌಡ ಹೇಳಿದರು.
ಜು.೧ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯ ನಗರದಲ್ಲಿರುವ ಜೂನಿಯರ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಈ ಬಾರಿ ನಿರೀಕ್ಷೆ ಮೀರಿದ ವಿದ್ಯಾರ್ಥಿಗಳು ದಾಖಲಾತಿಗೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 110 ಮಂದಿಗೆ ಅವಕಾಶ ನೀಡಲಾಗಿದೆ. ಅವಕಾಶ ಸಿಗದೇ ಇದ್ದವರನ್ನು ಅನಿವಾರ್ಯವಾಗಿ ಕಲಾ ವಿಭಾಗಕ್ಕೆ ಸೇರಿಸಲಾಗಿದೆ. ಈ ಸಮಸ್ಯೆ ಮನಗಂಡು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರ ಗಮನಕ್ಕೆ ತರಲಾಗಿದೆ. ಅವರಿಗೆ ಮನವಿ ನೀಡಿದ ಮೇರೆಗೆ ಗಾಂಧಿನಗರ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ತೆರೆಯಲು ಅದೇಶ ನೀಡಿದ್ದಾರೆ ಎಂದು ಅವರು ವಿವರಿಸಿದರು. ಉಪನ್ಯಾಸಕರನ್ನು ಹೊಂದಾಣಿಕೆ ಮಾಡಿಕೊಳ್ಳಲು ಗುತ್ತಿಗಾರು ಮತ್ತು ಐವರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿರುವ ಉಪನ್ಯಾಸಕರ ನಿಯುಕ್ತಿಗೆ ಸೂಚಿಲಾಗಿದೆ. ಅದು ಸಾಧ್ಯ ಆಗದಿದ್ದರೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಅವಕಾಶ ಇದೆ ಎಂದು ಗಾಂಧಿನಗರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಆಂಟನಿ ಮಸ್ಕರೇನಸ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸುಳ್ಯ ಜೂನಿಯರ್ ಕಾಲೇಜು ಪ್ರಾಂಶುಪಾಲ ಚಿದಾನಂದ ಮಜಿಕೋಡಿ, ಗಾಂಧಿನಗರ ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ, ಆಡಳಿತ ಮಂಡಳಿ ಸದಸ್ಯರಾದ ಜೆ.ಕೆ.ರೈ, ಕೆ.ಬಿ.ಇಬ್ರಾಹಿಂ ಇದ್ದರು.

gandinagara pa poo college nalli vanijya vibaga aramba gandinagara pa poo collegenalli vanijya vibaga open

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.