HomePage_Banner
HomePage_Banner
HomePage_Banner
HomePage_Banner

ಎಡಮಂಗಲ: ಕೃಷಿ ವಿಚಾರಗೋಷ್ಠಿ ಕಾರ್ಯಕ್ರಮ

ಬೆಳ್ಳಾರೆ ವಲಯ ಮಟ್ಟದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೃಷಿ ವಿಚಾರಗೋಷ್ಠಿ ಕಾರ್ಯಕ್ರಮವು ಜು.5ರಂದು ಎಡಮಂಗಲ ಸ.ಹಿ.ಪ್ರಾ,ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸದಸ್ಯ ಸುಂದರ ಗೌಡ ದೋಳ್ತಿಲ ಉದ್ಘಾಟಿಸಿದರು. ಎಡಮಂಗಲದ ಪ್ರಗತಿಪರ ಕೃಷಿಕ ಪದ್ಮನಾಭ ರೈ ಎಂಜೀರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿ ಯುವರಾಜ್ ಜೈನ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಾರಾವತಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಾಜೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೃಷಿ ಪೂರಕ ಹೈನುಗಾರಿಕೆ ಮತ್ತು ಲಾಭದಾಯಕ ಹೈನುಗಾರಿಕೆ ವಿಚಾರಗೋಷ್ಠಿಯನ್ನು ಆಯೋಜಿಸಿದ್ದು, ಬೆಳ್ಳಾರೆ ಪಶುವೈದ್ಯಾಧಿಕಾರಿ ಡಾ| ಸೂರ್ಯನಾರಾಯಣ ಭಟ್‌ರವರು ಲಾಭದಾಯಕ ಹೈನುಗಾರಿಕೆ ವಿಚಾರದ ಬಗ್ಗೆ ಹಾಗೂ ದಿವಾಕರ್ ನಾಯಕ್ ಎರ್ಮೆಟ್ಟಿ ಕೃಷಿ ಪೂರಕ ಹೈನುಗಾರಿಕೆಯ ಬಗ್ಗೆ ಮಾಹಿತಿಯನ್ನು ನೀಡುವುದರ ಜೊತೆಗೆರೈತರ ಪ್ರಶ್ನೆಗಳಿಗೆ ಸಂವಾದದ ಮೂಲಕ ಮಾಹಿತಿಯನ್ನು ನೀಡಿದರು. ಸುಮಾರು 285 ಮಂದಿ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
ಬೆಳ್ಳಾರೆ ವಲಯ ಮೇಲ್ವಿಚಾರಕಿ ಶ್ರೀಮತಿ ಸ್ಮಿತಾ ಸ್ವಾಗತಿಸಿ, ಎಡಮಂಗಲ ಬಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ದಾಮೋದರ್ ವಂದಿಸಿದರು. ಕೃಷಿ ಮೇಲ್ವಿಚಾರಕಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

edamangala -1kirishi vichara goshti (2) edamangala -1kirishi vichara goshti (3)

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.