ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಎ.ವಿ.ತೀರ್ಥರಾಮರ ಆಸಕ್ತಿಯಲ್ಲಿ ದೀಪಾವಳಿ ಪ್ರಯುಕ್ತ ರಿಯಾಯಿತಿ ದರದಲ್ಲಿ ಮೀನು ಮಾರಾಟ ನಡೆಯಿತು.
ನಿನ್ನೆ ಸುಳ್ಯದ ಗಾಂಧಿನಗರದಲ್ಲಿರುವ ನಿಗಮದ ಮೀನು ಮಾರಾಟ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಮೀನುಗಳನ್ನು ಮಾರಾಟ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮರು ಮಾರಾಟ ಕೇಂದ್ರಕ್ಕೆ ಭೇಟಿ ನೀಡಿದರು.