ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಡಿ.23 ರಂದು ವಿಡಿಯೋ ಸಂವಾದದ ಮೂಲಕ ನಡೆಯಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಡಿ. 23ರ, ಶುಕ್ರವಾರದಂದು ಪೂರ್ವಾಹ್ನ 11:00 ಅಪರಾಹ್ನ 12:00 ಗಂಟೆಯವರೆಗೆ ಅಧೀಕ್ಷಕ ಇಂಜಿನಿಯರ್(ವಿ), ಕಾರ್ಯ ಮತ್ತು ಪಾಲನೆ ವೃತ್ತ ಕಛೇರಿ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಹಕರು ತಮ್ಮ G-mail accountನ ಮುಖಾಂತರ ಈ ಕೆಳಗೆ ನಮೂದಿಸಿರುವ ಲಿಂಕ್ನಲ್ಲಿ ವಿಡಿಯೋ ಸಂವಾದದ ಮೂಲಕ ತಮ್ಮ ದೂರುಗಳನ್ನು ಸಲ್ಲಿಸಬಹುದು.