ಮುರುಳ್ಯ ಶಾಂತಿನಗರ ಶಾಲಾ ಪ್ರಾರಂಭೋತ್ಸವ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರದಲ್ಲಿ ಮೇ. 31ರಂದು ಶಾಲಾ ಪ್ರಾರಂಭೋತ್ಸವ ನಡೆಯಿತು. ಮುರುಳ್ಯ ಗ್ರಾ.ಪಂ. ಅಧ್ಯಕ್ಷೆ ಕು. ಜಾನಕಿ ಮುರುಳ್ಯ ಬ್ಯಾಂಡ್ ಬಾರಿಸುವ ಮೂಲಕ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ವನಿತಾ ಸುವರ್ಣ, ಸದಸ್ಯರಾದ ಶೀಲಾವತಿ ಗೊಳ್ತಿಲ, ಮೋನಪ್ಪ ಅಲೇಕಿ, ಎಸ್.ಡಿ.ಎಂ.ಸಿ ಅಧ್ಯಕ್ಷ ದಿನೇಶ್ ನಡುಭ್ಯೆಲು, ಉಪಾಧ್ಯಕ್ಷೆ ಶ್ರೀಮತಿ ಬೇಬಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮವಸ್ತ್ರ, ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳನ್ನು ಸಂಭ್ರಮ ಸಡಗರದಿಂದ ಬರಮಾಡಿಕೊಳ್ಳಲಾಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಸರೋಜಿನಿ ಕೆ ಸ್ವಾಗತಿಸಿದರು. ಶಿಕ್ಷಕ ವೃಂದದವರು ಪೋಷಕರು ಉಪಸ್ಥಿತರಿದ್ದರು. ಮಧ್ಯಾಹ್ನ ಬಿಸಿಯೂಟ, ಸಿಹಿತಿಂಡಿ ನೀಡಲಾಯಿತು.