ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಶಾಸಕಿ ಭೇಟಿ

0

ಶಕ್ತಿ ಯೋಜನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಭಾಗೀರಥಿ ಮುರುಳ್ಯ

ಪ್ರಯಾಣಿಕರೊಂದಿಗೆ ಮಾತುಕತೆ: ತೊಂದರೆ ಆಗದಂತೆ ಕಾರ್ಯನಿರ್ವಹಿಸಲು ಸಿಬ್ಬಂದಿಗಳಿಗೆ ಸೂಚನೆ

ನಿನ್ನೆ ನಡೆದ ಶಕ್ತಿ ಯೋಜನೆಯ ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು, ಇಂದು ಕೆ. ಎಸ್. ಆರ್.ಟಿ. ಸಿ. ಬಸ್ ನಿಲ್ದಾಣಕ್ಕೆ ಭೇಟಿ ನೀಡಿದರು.

ಸರ್ಕಾರದ ಶಕ್ತಿ ಯೋಜನೆಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು ಆರೈಕೆ ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದರು.

ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಗಾಲದಲ್ಲಿ ಪರಿಸರವನ್ನು ಸ್ವಚ್ಛವಾಗಿಡಬೇಕೆಂದು ಸೂಚುಸಿದರು. ನಂತರ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಮೂಲಭೂತ ಸೌಕರ್ಯಗಳ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.