ಪೆರಾಜೆ ಸೊಸೈಟಿ ಚುನಾವಣೆ : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

0


ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಜೂ.25 ರಂದು ಚುನಾವಣೆ ನಡೆಯಲಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.


ನಾಮಪತ್ರ ಸಲ್ಲಿಕೆ ಇಂದು ಬೆಳಿಗ್ಗೆ 11 ಗಂಟೆಯಿಂದ ಆರಂಭಗೊಂಡಿದ್ದು, ಜೂ. 17 ಶನಿವಾರ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜೂ. 18 ರಂದು ನಾಮಪತ್ರಗಳ ಪರಿಶೀಲನೆ ನಡೆದು, ಅಭ್ಯರ್ಥಿಗಳ ಪಟ್ಟಿಯ ಪ್ರಕಟಣೆ ನಡೆಯಲಿದೆ.

ಜೂ. 19 ರಂದು ಸೋಮವಾರ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಜೂ. 19ರಂದು ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ ನಡೆಯಲಿದೆ. ಜೂ. 25 ಆದಿತ್ಯವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯಿಂದ ಮತದಾನ ನಡೆದು ಬಳಿಕ ಮತ ಎಣಿಕೆ ನಡೆಯಲಿದೆ. ಬಿ.ಜಿ. ಸಂದೀಪ್ ಅವರು ರಿಟರ್ನಿಂಗ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.