ಜಾಲ್ಸೂರು: ಶಾಸಕಿ ಭಾಗೀರಥಿ ಮುರುಳ್ಯ ಭೇಟಿ- ಸನ್ಮಾನ

0

ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಕೆ

ಜಾಲ್ಸೂರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಕೆ ಸಭೆಯು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜೂ.17ರಂದು ಸಂಜೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಆರತಿ ಬೆಳಗಿ ಸ್ವಾಗತಿಸಲಾಯಿತು. ಬಳಿಕ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ‌.ಎಂ. ಬಾಬು ಕದಿಕಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು.


ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸುಳ್ಯ ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಬಿಜೆಪಿ ಅಜ್ಜಾವರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಜ್ಜಾವರ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಹೇಮಂತ್ ಮಠ, ಜಾಲ್ಸೂರು ಶಕ್ತಿಕೇಂದ್ರದ ಪ್ರಮುಖರಾದ ಸುಖೇಶ್ ಅಡ್ಕಾರುಪದವು, ಸಹ ಪ್ರಮುಖ್ ವೆಂಕಟೇಶ ನಡುಬೆಟ್ಟು, ಜಾಲ್ಸೂರು, ದ.ಕ. ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಮಾದವ ಗೌಡ ಕಾಳಮನೆ, ಐ.ಕೆ. ಹೇಮಚಂದ್ರ ಕದಿಕಡ್ಕ, ಗಂಗಾಧರ ಕಾಳಮನೆ, ತಿಮ್ಮಯ್ಯ ಆಚಾರ್ಯ ಜಾಲ್ಸೂರು, ಕನಕಮಜಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಕನಕಮಜಲು ಸಹಕಾರಿ ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು, ಜಾಲ್ಸೂರು ಗ್ರಾ.ಪಂ. ಸದಸ್ಯರುಗಳಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಪಿ‌.ಆರ್. ಸಂದೀಪ್ ಕದಿಕಡ್ಕ, ಈಶ್ವರ ನಾಯ್ಕ ಕುಕ್ಕಂದೂರು, ಶಿವಪ್ರಸಾದ್ ನೀರಬಸಿರು, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ಗೀತಾ ಚಂದ್ರಶೇಖರ ಅರ್ಭಡ್ಕ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.