ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ

0

ಸುಳ್ಯ ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷೆಯಾಗಿದ್ದ, ಪ್ರಸ್ತುತ ಕ್ಷೇತ್ರದ ಶಾಸಕರಾಗಿರುವ ಕು.ಭಾಗೀರಥಿ ಮುರುಳ್ಯ ರಿಗೆ ಯುವಜನ ಸಂಯುಕ್ತ ಮಂಡಳಿ ಹಾಗೂ ಯುವಜನ ಸೇವಾ ಸಂಸ್ಥೆಯ ವತಿಯಿಂದ ಸನ್ಮಾನ ಸಮಾರಂಭ ಜೂ.17 ರಂದು ಮಂಡಳಿ ಸಭಾಂಗಣದಲ್ಲಿ ನಡೆಯಿತು.

ಯುವಜನ ಸಂಯುಕ್ತ ಮಂಡಳಿಯ ಸ್ಥಾಪಕ ಗೌರವ ಕಾರ್ಯದರ್ಶಿ ಎಂ.ಮೀನಾಕ್ಷಿ ಗೌಡ ಸನ್ಮಾನ ನೆರವೇರಿಸಿದರು.


ಮಂಡಳಿ ಪೂರ್ವಾಧ್ಯಕ್ಷ ಎಂ‌.ಬಿ.ಸದಾಶಿವ ಅಭಿನಂದನಾ ಭಾಷಣ ಮಾಡಿದರು.

ಸನ್ಮಾನ ಸ್ವೀಕರಿಸಿದ ಶಾಸಕಿ ಭಾಗೀರಥಿ ಮುರುಳ್ಯ ಕೃತಜ್ಞತೆ ಸಲ್ಲಿಸಿದರು. ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ತೇಜಸ್ವಿ ಕಡಪಳ, ಗೌರವಾಧ್ಯಕ್ಷ ದಯಾನಂದ ಕೇರ್ಪಳ, ಕಾರ್ಯದರ್ಶಿ ಸಂಜಯ್ ನೆಟ್ಟಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಸ್ವಾಗತಿಸಿದರು.

ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ತೇಜಸ್ವಿ ಕಡಪಳ ವಂದಿಸಿ, ಕೋಶಾಧಿಕಾರಿ ಮುರಳಿ ನಳಿಯಾರು ಕಾರ್ಯಕ್ರಮ ನಿರೂಪಿಸಿದರು.