ಬೆಳ್ಳಾರೆ ಜ್ಞಾನದೀಪದಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ

0


ಭಾರತ ಸರ್ಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗೀಕೃತ ಸಂಸ್ಥೆ ಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2023-24ನೇ‌ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ಪ್ರಾರಂಭೋತ್ಸವ ಮತ್ತು ಸಂಸ್ಥೆಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಕೋರ್ಸ್ ಕಿಟ್ ವಿತರಣಾ ಕಾರ್ಯಕ್ರಮ ಸಂಸ್ಥೆಯಲ್ಲಿ ನಡೆಯಿತು.

ಸುಳ್ಯದ ರೋಟರಿ ಆಂಗ್ಲಮಾಧ್ಯಮ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಅಚ್ಚುತ್ತ ಅಟ್ಲೂರು 2023-24ನೇ ಸಾಲಿನ ಶಿಕ್ಷಕಿಯರ ತರಬೇತಿಯನ್ನು ಉದ್ಘಾಟಿಸಿ ಶುಭಹಾರೈಸಿದರು. ಮೊಂಟೆಸ್ಸರಿ ತರಬೇತಿ ಶಿಕ್ಷಕಿ ಗೀತಾ ಬಾಲಚಂದ್ರ ಕೋರ್ಸ್ ಕಿಟ್ ವಿತರಿಸಿದರು.

ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಕಾರ್ಯಕ್ರಮ ನಿರ್ವಹಿಸಿದರು.