ಸ್ಪೀಕರ್ ಯು.ಟಿ.ಖಾದರ್ ರನ್ನು ಭೇಟಿಯಾದ ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ

0

ಉಳ್ಳಾಲ ನಗರ ಪೌರ ಸನ್ಮಾನ ಸಮಿತಿ ವತಿಯಿಂದ ವಿಧಾನ ಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಗೊಂಡ ಯು ಟಿ ಖಾದರ್ ರವರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರಾದ ಟಿ.ಎಂ ಶಾಹೀದ್, ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಕೀಷನ್ ಘಟಕದ ಅಧ್ಯಕ್ಷರಾದ ಸುರೇಶ್ ಎಂ.ಎಚ್, ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ, ಬ್ಲಾಕ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ, ಎನ್ ಎಸ್ ಯು ಐ ಕಾರ್ಯದರ್ಶಿ ಉಬೈಸ್ ಗೂನಡ್ಕ, ಶಾಜ್ ತೆಕ್ಕಿಲ್ ಉಪಸ್ಥಿತರಿದ್ದರು.