ಮಂಡೆಕೋಲು : ಪರಿಸರ ಜಾಗೃತಿ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಡೆಕೋಲಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಡೆಕೋಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ ನಡೆಯಿತು.

ಅಧ್ಯಕ್ಷತೆಯನ್ನು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಕಾರ್ಯಕ್ರಮ ಉದ್ಘಾಟಿಸಿದರು. ಹಾಸನ ವಲಯ ಮೀಸಲು ಪೊಲೀಸ್ ಪಡೆಯ ಅಧಿಕಾರಿ ದಿನೇಶ್ ಪರಿಸರ ಜಾಗೃತಿ ಬಗ್ಗೆ ಉಪನ್ಯಾಸ ನೀಡುದರು. ವೇದಿಕೆಯಲ್ಲಿ ಅಜ್ಜಾವರ ವಲಯ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.


ಶಾಲಾ ಆವರಣಗಳಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ವಲಯ ಮೇಲ್ವಿಚಾರಕಿ ವಿಶಾಲ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಲ್ಲಡ್ಕ ಒಕ್ಕೂಟದ ಸೇವಾ ಪ್ರತಿನಿಧಿ ಸುನಿತಾ ವಂದಿಸಿದರು. ಸೇವಾಪ್ರತಿನಿಧಿ ವೇದಾವತಿ ಕಾರ್ಯಕ್ರಮ ನಿರೂಪಿಸಿದರು.