ಆದಿದ್ರಾವಿಡ ಸೇವಾ ಸಂಘದಿಂದ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಸನ್ಮಾನ

0

ಆದಿದ್ರಾವಿಡ ಸಮಾಜ ಸೇವಾ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಕು. ಭಾಗೀರಥಿ ಮುರುಳ್ಯ ಇವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭ ತಾಲೂಕಿನ ಆದಿದ್ರಾವಿಡ ಸಮುದಾಯದವರಿಗೆ ತಾಲೂಕು ಕೇಂದ್ರದಲ್ಲಿ ಸಮುದಾಯ ಭವನ ಹಾಗೂ ಸಮುದಾಯದವರ ನಿವೇಶನಗಳಿಗೆ ಹಕ್ಕು ಪತ್ರ ಮತ್ತು ಇತರ ಮೂಲಭೂತ ಸೌಕರ್ಯ ಒದಗಿಸಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಮೋನಪ್ಪ ರಾಜರಾಂಪುರ, ಗೌರವಾಧ್ಯಕ್ಷ ಬಾಬು ಜಾಲ್ಸೂರು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಸಿ.ಎ ಬ್ಯಾಂಕ್ ನಿರ್ದೇಶಕ ಶೀನಪ್ಪ ಬಯಂಬು, ತಾಲೂಕು ಪದಾಧಿಕಾರಿಗಳು ಹಾಗೂ ಗ್ರಾಮ ಸಮಿತಿ ಸದಸ್ಯರು ಉಪಸ್ಥಿತರಿದ್ದರು.