ಎಡಮಂಗಲ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ

0

ಶಾಲಾ ಶಿಕ್ಷಣ ಇಲಾಖೆ, ಆಶ್ರಯದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಮತ್ತು ಎಡಮಂಗಲ ಸರಕಾರಿ ಪ್ರೌಢಶಾಲಾ ಸಹಯೋಗದೊಂದಿಗೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಎಡಮಂಗಲ ಪ್ರೌಢಶಾಲೆಯಲ್ಲಿ ಇಂದು ನಡೆಯಿತು.


ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು.
ಶಾಲ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಗದೀಶ್ ಮರೋಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಮೂಡಿತ್ತಾಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ, ಎಡಮಂಗಲ ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಕಜ್ಜೋಡಿ, ಶಿಕ್ಷಣ ಸಂಯೋಜಕರಾದ ನಳಿನಿ, ಸಂಧ್ಯಾಕುಮಾರಿ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸೂಫಿ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಚೇರಿ ದಾಖಲೆ ನಿರ್ವಹಣೆ ವಿಚಾರಚವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೇಲ್ವಿಚಾರಕ ಶಿವಪ್ರಸಾದ್, ವಸಂತ ಕಾರ್ಯಾಗಾರ ನಡೆಸಿಕೊಟ್ಟರೆ, ಮಧ್ಯಾಹ್ನದ ಬಳಿಕ ರಾಮಕುಂಜ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸತೀಶ್ ಭಟ್ ಶಾಲಾಭಿವೃದ್ಧಿ ಯೋಜನೆಯ ಅನುಷ್ಠಾನ – ಒಂದು ಸವಾಲು ವಿಚಾರವಾಗಿ ಕಾರ್ಯಾಗಾರ ನಡೆಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಎಡಮಂಗಲ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಚಂದ್ರ ಕಜ್ಜೋಡಿ ಸ್ವಾಗತಿಸಿ, ಶಿಕ್ಷಕ ಆನಂದ ಕೆ.ಎಸ್. ವಂದಿಸಿದರು. ಸಹ ಶಿಕ್ಷಕ ಸಂತೋಷ್ ಎಸ್.ಪಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಸದಸ್ಯರು ಸಹಕರಿಸಿದರು. ಸುಳ್ಯ ಶೈಕ್ಷಣಿಕ ವಲಯದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.