ಅನ್ನಭಾಗ್ಯ ಅಕ್ಕಿ ಬದಲು ಹಣ ನೀಡಲು ಸಚಿವ ಸಂಪುಟ ನಿರ್ಧಾರ

0

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಆಹಾರ ಸಚಿವ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಎಚ್​​ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದ್ದು ಇದರೊಂದಿಗೆ ಅನ್ನಭಾಗ್ಯಯೋಜನೆಯಡಿ ಬಿಪಿಎಲ್​ ಕಾರ್ಡ್​​ದಾರರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5ಕೆಜಿ ಅಕ್ಕಿಯ ಬದಲು ಹಣ ದೊರೆಯಲಿದೆ ಎನ್ನಲಾಗಿದೆ.


ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದ್ದಾರೆ.