ಸೋಣಂಗೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ಸೋಣಂಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.28ರಂದು ಜರುಗಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಪ್ರೇಮ ರೈ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕರಾದ ರಮೇಶ್ ಅವರು ಯೋಜನೆಯ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.


ನಿವೃತ್ತ ಮುಖ್ಯ ಗುರುಗಳಾದ ಅರಳಪ್ಪನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು, ಪರಿಸರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮಾವತಿ , ಸಹ ಶಿಕ್ಷಕರು ಸೇರಿ ಮಕ್ಕಳಿಗೆ ಪರಿಸರ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವೇದಿಕೆಯಲ್ಲಿರುವ ಗಣ್ಯರಿಂದ ಬಹುಮಾನ ವಿತರಣೆ ಮಾಡಿಸಿದರು.


ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಾಲ್ಸುರು ವಲಯದ ಜನಜಾಗೃತಿ ವೇದಿಕೆಯ ವಲಯಧ್ಯಕ್ಷ ಭಾಸ್ಕರ ಅಡ್ಕಾರು, ನಿವೃತ್ತ ಆರೋಗ್ಯ ಅಧಿಕಾರಿ ರುಕ್ಮಯ್ಯ ಗೌಡ, ವಲಯ ಮೇಲ್ವಿಚಾರಕ ತೀರ್ಥರಾಮ, ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯರಾದ ಈಶ್ವರ ನಾಯ್ಕ ಕುಕ್ಕಂದೂರು, ಭಜನಾ ಪರಿಷತ್ ನಿರ್ದೇಶಕ ಪುರುಷೋತ್ತಮ, ಸೇವಾಪ್ರತಿನಿಧಿ ಶ್ರೀಮತಿ ಸೌಮ್ಯ ಉಪಸ್ಥಿತರಿದ್ದರು.


ಸೋಣಂಗೇರಿ ಒಕ್ಕೂಟ ಅಧ್ಯಕ್ಷರಾದ ಗಿರಿಧರ ನಾಯರ್ ಹಿತ್ಲು ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಸವಿತ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.