














ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಯಮೂಲೆ ಅಂಗನವಾಡಿ ಕೇಂದ್ರ, ಮಂಡೆಕೋಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಂಬಳ್ಳ ಅಂಗನವಾಡಿ ಕೇಂದ್ರ ಹಾಗೂ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಡೋಡಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಯು ಖಾಲಿಯಿದ್ದು, ಸದರಿ ಅಂಗನವಾಡಿ ಕೇಂದ್ರಗಳಿಗೆ ಅದೇ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕನಿಷ್ಠ 5 ವರ್ಷ ಅಂಗನವಾಡಿ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದು, ಪದವಿ ಪೂರ್ವ ಶಿಕ್ಷಣ (ಪಿಯುಸಿ) ಪೂರೈಸಿರುವ ಅರ್ಹ ಅಭ್ಯರ್ಥಿಗಳು ಮುಂಭಡ್ತಿಗೆ ಅರ್ಜಿ ಸಲ್ಲಿಬಹುದಾಗಿದೆ ಎಂದು ಸಿಡಿಪಿಒ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.









