ಜೂ.30 : ಐವರ್ನಾಡು ಗ್ರಾ.ಪಂ.ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

0

ವನ ಮಹೋತ್ಸವ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಪ್ರಾ.ಕೃ.ಪ.ಸ.ಸಂಘ,ಅರಣ್ಯ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಹಾಗೂ ವನ ಮಹೋತ್ಸವ ಮತ್ತು ವಿವಿಧ ಸಾರ್ವಜನಿಕ ಕಾಮಗಾರಿಗಳ ಉದ್ಘಾಟನೆಯು ಜೂ.30 ರಂದು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಲಿದೆ.
ಶಾಸಕಿ ಭಾಗೀರಥಿ ಮುರುಳ್ಯ ಗ್ರಂಥಾಲಯ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ಇಲಾಖಾಧಿಕಾರಿಗಳು ಹಾಗೂ ಹಲವು ಜನ ಗಣ್ಯರು ಉಪಸ್ಥಿತರಿರುವರು.