ಎಸ್.ಎಸ್.ಪಿ.ಯು.ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘ ಉದ್ಘಾಟನೆ

ಚೆಂಡೆ ವಾದನದ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

0

ಎಸ್.ಎಸ್.ಪಿ.ಯು.ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಜು.1ರಂದು ಕಾಲೇಜಿನ ಸಾಂಸ್ಕೃತಿಕ ಸಂಘ ಉದ್ಘಾಟನೆ ಮತ್ತು ಪ್ರತಿಭಾ ಪ್ರದರ್ಶನ ನಡೆಯಿತು.

ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ದೀಪ ಪ್ರಜ್ವಲನದ ಮೂಲಕ ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಭೆಯು ಸರ್ವರಿಗೂ ತಿಳಿಸುವ ಉದ್ದೇಶದಿಂದ ಸಾಂಸ್ಕೃತಿಕ ತಂಡ ರಚಿಸಲಾಗುತಿದ್ದು. ತಂಡವನ್ನು ಸಂಘದ ಸಂಚಾಲಕರ ನೇತೃತ್ವದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಸಜ್ಜುಗೊಳಿಸಲಾಗುವುದು. ವಿವಿಧ ಊರುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕಾಲೇಜಿನ ತಂಡವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ನಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಭೆ ಸರ್ವರಿಗೂ ತಿಳಿಯುವಂತೆ ಯೋಚನೆ ಮಾಡಲಾಗಿದೆ ಎಂದು ಪ್ರಾಚಾರ್ಯರು ತಿಳಿಸಿದರು.

ಚೆಂಡೆ ವಾದನದ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಕೇರಳ ಚೆಂಡೆಯ ಪ್ರಾವಿಣ್ಯತೆ ಹೊಂದಿದ ವಿದ್ಯಾರ್ಥಿಗಳು ಸಿಂಗಾರಿ ಮೇಳ ನೆರವೇರಿಸಿದರು .
ತೀರ್ಪುಗಾರರಾದ ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್, ಇನ್ನರ್‌ವ್ಹೀಲ್ ಅಧ್ಯಕ್ಷೆ ಸರೋಜಾ ಮಾಯಿಲಪ್ಪ, ಉಪನ್ಯಾಸಕಿ ಮತ್ತು ಭಾಗವತೆ ಭವ್ಯಶ್ರೀ ಹರೀಶ್ ಕುಲ್ಕುಂದ ಮುಖ್ಯಅತಿಥಿಗಳಾಗಿದ್ದರು. ಸಾಂಸ್ಕೃತಿಕ ತಂಡದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸರಕಾರದ ಸಂಚಾಲಕ ಜಯಪ್ರಕಾಶ್.ಆರ್, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವಿದ್ಯಾಲಕ್ಷ್ಮೀ, ವೇದಿಕೆಯಲ್ಲಿದ್ದರು. ಸಾಂಸ್ಕೃತಿಕ ಸಂಘದ ಸಹಸಂಚಾಲಕ ರತ್ನಾಕರ ಸುಬ್ರಹ್ಮಣ್ಯ ಸ್ವಾಗತಿಸಿದರು. ಉಪನ್ಯಾ