ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ ಮತ್ತು ಸ್ಕೌಟ್ ಗೈಡ್ ಶಿಕ್ಷಕರ ಮಾಹಿತಿ ಕಾರ್ಯಾಗಾರ

0

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಜು. 02ರಂದು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಮಾಧವ ಬಿ.ಕೆಯವರ ಅಧ್ಯಕ್ಷತೆಯಲ್ಲಿ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.


ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷೆ, ಪಂಜ ಸ್ಥಳೀಯ ಸಂಸ್ಥೆಯ ಎ.ಡಿ.ಸಿ ವಿಮಲ ರಂಗಯ್ಯ ಸ್ಕೌಟ್ ಗೈಡ್ ವಾರ್ಷಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿ,
ರಾಜ್ಯ ಸಂಸ್ಥೆಯ ವಾರ್ಷಿಕ ಯೋಜನಾ ಪುಸ್ತಕವನ್ನು ಬಿಡುಗಡೆಗೊಳಿಸಿದರು.


ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಭಾಗವಹಿಸಿ ಸ್ಥಳೀಯ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ರಾಜ್ಯ ಮತ್ತು ಜಿಲ್ಲಾ ಸಂಸ್ಥೆಯ 2023-24ರ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿ ಶುಭ ಹಾರೈಸಿದರು.
ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಪಂಜ ವಲಯದ ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ ಉಪಸ್ಥಿತರಿದ್ದು, ಶುಭ ಹಾರೈಸಿ, ಇಲಾಖಾ ಮಾರ್ಗದರ್ಶನ ನೀಡಿದರು.
ಉಪಾಧ್ಯಕ್ಷರಾದ ಬಾಲಕೃಷ್ಣ ಹೇಮಳ ಶುಭ ಹಾರೈಸಿದರು.

2022-23ರ ವಾರ್ಷಿಕ ವರದಿ, 2023-24ರ ಯೋಜಿತ ಕಾರ್ಯಕ್ರಮಗಳ ಮಾಹಿತಿಯನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ರೈ ಬಾಳಿಲ ನೀಡಿದರು. 2022-23 ಲೆಕ್ಕಪತ್ರ ಹಾಗೂ 2023-24ರ ಮುಂಗಡಪತ್ರವನ್ನು ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ವಾಸುದೇವ ನಡ್ಕ ಮಂಡಿಸಿದರು. ಸ್ಥಳೀಯ ಸಂಸ್ಥೆಯ ದ್ವಿತೀಯ ಸೋಪಾನ ಪರೀಕ್ಷಾ ಪ್ರಮಾಣ ಪತ್ರಗಳನ್ನು ಶಾಲೆಗಳಿಗೆ ವಿತರಿಸಲಾಯಿತು.

ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಸ್ಕೌಟ್ ಶಿಕ್ಷಕರು ಗೈಡ್ ಶಿಕ್ಷಕಿಯರು ರೋವರ್ ರೇಂಜರ್ ಉಪನ್ಯಾಸಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಉಪಾಧ್ಯಕ್ಷ ಸೋಮಶೇಖರ ನೆರಳ ಸ್ವಾಗತಿಸಿ, ಉಪಾಧ್ಯಕ್ಷ ದಾಮೋದರ ನೆರಳ ವಂದಿಸಿದ ಈ ಕಾರ್ಯಕ್ರಮವನ್ನು ಕಾರ್ಯದರ್ಶಿ, ಉದಯಕುಮಾರ್ ರೈ ಬಾಳಿಲ ನಿರೂಪಿಸಿದರು.

ಮಹಾಸಭೆಯ ಬಳಿಕ ಸ್ಕೌಟ್ ಗೈಡ್ ಶಿಕ್ಷಕರಿಗೆ ಭರತ್ ರಾಜ್ ರವರು ಮಾಹಿತಿ ಕಾರ್ಯಾಗಾರವನ್ನು ನಡೆಸಿದರು.