ಪಾಂಡಿಗದ್ದೆ ಶಾಲೆ ಯಲ್ಲಿ ಹಣ್ಣಿನ ಗಿಡ ನಾಟಿ ಮಾಡುವ ‘ ಪರಿಸರ ಕಾರ್ಯಕ್ರಮ”

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಂಜ ವಲಯ ಹಾಗೂ ಪಂಜ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಣ್ಣಿನ ಗಿಡ ನಾಟಿ ಮಾಡುವ ಮೂಲಕ ಪರಿಸರ ಕಾರ್ಯಕ್ರಮ ವನ್ನು ಮಾಡಲಾಯಿತು. ಈ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ ವಹಿಸಿದ್ದರು.


ಕಾರ್ಯಕ್ರಮ ವನ್ನು ಪಂಜ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರವಿಪ್ರಕಾಶ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.


.ಮುಖ್ಯ ಅತಿಥಿಯಾಗಿ ಅರಣ್ಯ ರಕ್ಷಕ ಮಹೇಶ್ ಕುಮಾರ್, ಅರಣ್ಯ ವೀಕ್ಷಕ ವಿಜಯ ಕುಮಾರ್, ಮತ್ತು ಮೋಹನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಯಶೋಧರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ರಮೇಶ್ ಕೆ,ಪಂಜ ವಲಯ ಮೇಲ್ವಿಚಾರಕಿ ಶ್ರೀಮತಿ ಕಲಾವತಿ, ಐವತ್ತೊಕ್ಲು ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.

ಯೋಜನೆಯ ವತಿಯಿಂದ ಮಕ್ಕಳಿಗೆ ಪರಿಸರಕ್ಕೆ ಸಂಬಂದಿಸಿದ ಸ್ಪರ್ಧೆ ಗಳನ್ನು ಮಾಡಿ, ಗಣ್ಯರಿಂದ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಕು.ಪರೀಕ್ಷಿತಾ ಪ್ರಾರ್ಥಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ವಿಂಧ್ಯಾ ಸ್ವಾಗತಿಸಿದರು. ಐವತೋಕ್ಲು ಒಕ್ಕೂಟದ ಸೇವಾಪ್ರತಿನಿಧಿ ಶ್ರೀಮತಿ ರೋಹಿಣಿ ಆರ್ನೋಜಿ ವಂದಿಸಿದರು. ವಲಯ ಮೇಲ್ವಿಚಾರಕಿ ಶ್ರೀಮತಿ ಕಲಾವತಿ ಕಾರ್ಯಕ್ರಮ ನಿರೂಪಿಸಿದರು.ಆಗಮಿಸಿದ ಎಲ್ಲರಿಗೂ ಯೋಜನೆ ವತಿಯಿಂದ ಸಿಹಿ ತಿಂಡಿ ವಿತರಣೆ ಮಾಡಲಾಯಿತು .