ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ

0

ಮಾಧ್ಯಮಗಳು ಪತ್ರಿಕೋದ್ಯಮದ ವ್ಯಾಖ್ಯಾನಕ್ಕೆ ಘಾಸಿಯಾಗದಂತೆ ಕಾರ್ಯನಿರ್ವಹಿಸಬೇಕು: ಭವ್ಯ ಪಿ.ಆರ್.

ತನಿಖಾ ಪತ್ರಿಕೋದ್ಯಮದಲ್ಲಿ ನಿಖರವಾಗಿ ಕಾರ್ಯನಿರ್ವಹಿಸಿ: ಈರಯ್ಯ ದೂಂತೂರು

ಸಮಾಜದ ನಾಲ್ಕನೇ ಅಂಗವಾದ ಪತ್ರಿಕಾರಂಗವು ನಮ್ಮ ಸುತ್ತಮುತ್ತಲಿನ ಸಮಾಜವನ್ನು ಅಬ್ಯುದಯದತ್ತ ಕೊಂಡುಹೋಗುವ ಕೆಲಸವನ್ನು ಮಾಡಬೇಕು. ಇಂದಿನ ದಿನಗಳಲ್ಲಿ ಪತ್ರಿಕೋದ್ಯಮದ ಮೌಲ್ಯಗಳು ಕುಸಿಯುತ್ತಿದ್ದು, ಮಾಧ್ಯಮಗಳು ಪತ್ರಿಕೋದ್ಯಮದ ವ್ಯಾಖ್ಯಾನಕ್ಕೆ ಘಾಸಿಯಾಗದಂತೆ ಕೆಲಸ ಮಾಡಬೇಕು. ಪತ್ರಕರ್ತರು ಸಮಾಜದ ಪರಿವರ್ತನೆಗಾಗಿ ದುಡಿಯಬೇಕು ಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಶ್ರೀಮತಿ ಭವ್ಯ ನಿಡ್ಪಳ್ಳಿ ಅವರು ಹೇಳಿದರು.


ಅವರು ಸುಳ್ಯ ತಾಲೂಕು ಕೆ.ಜೆ.ಯು. ಘಟಕದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಉಪನ್ಯಾಸ ನೀಡಿದರು.


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಸಮಾರಂಭವು ಸುಳ್ಯದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಜು.4ರಂದು ಜರುಗಿತು.

ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೆ.ಜೆ‌.ಯು. ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ದೀಪಬೆಳಗಿಸಿ, ಉದ್ಘಾಟಿಸಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಘಟಕದ ಸ್ಥಾಪನೆ ಹಾಗೂ ಬೆಳೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ದಂಪತಿಗಳನ್ನು ಕೆ.ಜೆ.ಯು. ಸುಳ್ಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಮುಖ್ಯ ಅತಿಥಿ ಸ್ಥಾನದಿಂದ ಸುಳ್ಯ ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಈರಯ್ಯ ದೂಂತೂರು ಅವರು ಮಾತನಾಡಿ ‘ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ಸಂಪಾದಕನಾಗಿ ದುಡಿದ್ದೇನೆ. ಆ ಕಾಲದಲ್ಲಿ ಪತ್ರಿಕೆಗಳಲ್ಲಿ ಬರುವ ಕಟ್ಟಿಂಗ್ ಗಳನ್ನು ಸಂಗ್ರಹಿಸುವ ಜವಾಬ್ದಾರಿ ನನ್ನದಾಗಿತ್ತು. ತನಿಖಾ ಪತ್ರಿಕೋದ್ಯಮದಲ್ಲಿ ಅತ್ಯಂತ ಜವಾಬ್ದಾರಿಯುತವಾಗಿ ಮಾನವೀಯತೆಯಾಗಿಯೂ ಕೆಲಸ ಮಾಡಬೇಕು, ವಂಚನೆ ಅಪರಾಧಗಳಾದಾಗ ಪೊಲೀಸ್ ಕಂಟ್ರೋಲ್ ಗೆ ಕರೆಮಾಡಿ, ತಮ್ಮ ತಮ್ಮ ವ್ಯಾಪ್ತಿಯ ಬೀಟ್ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಿ ಎಂದರು.

ಸುಳ್ಯ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ, ಕೋಶಾಧಿಕಾರಿ ಶ್ರೀಮತಿ ಜಯಶ್ರೀ ಕೊಯಿಂಗೋಡಿ ಉಪಸ್ಥಿತರಿದ್ದರು.

ಚೈತ್ರಾ ಮುಳ್ಯ ಪ್ರಾರ್ಥಿಸಿದರು. ಈಶ್ವರ್ ವಾರಣಾಸಿ ಸನ್ಮಾನ ಪತ್ರ ವಾಚಿಸಿದರು. ಕೆ.ಜೆ.ಯು. ಘಟಕದ ಸದಸ್ಯ ಯಶ್ವಿತ್ ಕಾಳಂಮನೆ ಸ್ವಾಗತಿಸಿ, ರಮೇಶ್ ನೀರಬಿದಿರೆ ವಂದಿಸಿದರು. ಬೃಂದಾ ಪೂಜಾರಿ ಮುಕ್ಕೂರು ಹಾಗೂ ಪೂಜಾಶ್ರೀ ಪೈಚಾರ್ ಕಾರ್ಯಕ್ರಮ ನಿರೂಪಿಸಿದರು.