ಪಂಜ :ಲಯನ್ಸ್ ಕ್ಲಬ್ ವತಿಯಿಂದ ವನಮ‌ಹೋತ್ಸವ ಕಾರ್ಯಕ್ರಮ

0

ಗಿಡ ನೆಟ್ಟು ಬೆಳೆಸಿ ಪರಿಸರ ಸಂರಕ್ಷಿಸಿ : ವಲಯ ಅರಣ್ಯಾಧಿಕಾರಿ ಗಿರೀಶ್ ಆರ್.


ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ‘ವನಮಹೋತ್ಸವ’ ಹಣ್ಣಿನ ಗಿಡಗಳ ವಿತರಣೆ, ನಿರ್ವಹಣಾ ಮಾಹಿತಿ ಕಾರ್ಯಕ್ರಮ ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.8 ರಂದು ಜರಗಿತು.


ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು ಸಭಾಧ್ಯಕ್ಷತೆ ವಹಿಸಿದ್ದರು ‌.ವಲಯ ಅರಣ್ಯಾಧಿಕಾರಿ ಗಿರೀಶ್ .ಆರ್. ರವರು ಮಾಹಿತಿ ನೀಡಿ
“ಗಿಡ-ಮರಗಳ ಬೆಳೆಸುವುದರಿಂದ ಪರಿಸರದ ಸಮತೋಲನ ಕಾಪಾಡಲು ಸಾಧ್ಯವಿದೆ.ಕಾಲ ಕಾಲಕ್ಕೆ
ಸರಿಯಾಗಿ ಮಳೆ ಉತ್ತಮ ಪರಿಸರ ನಿರ್ಮಾಣವಾಗುತ್ತದೆ.ಪ್ರತಿಯೊಬ್ಬರು ಗಿಡ ನೆಟ್ಟು ಬೆಳೆಸಿ ಪರಿಸರ ಸಂರಕ್ಷಣೆ ಮಾಡಿ”.ಎಂದು ಹೇಳಿದರು.


ಅತಿಥಿಯಾಗಿ ಲಯನ್ಸ್ ವಲಯಾಧ್ಯಕ್ಷ ಸಂತೋಷ್ ಜಾಕೆ, ಲಯನ್ಸ್ ಜಿಲ್ಲಾ ಸಂಪುಟ ಸಂಯೋಜಕ ಮಾಧವ ಗೌಡ ಜಾಕೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶರತ್ ಕುದ್ವ, ಶ್ರೀಮತಿ ಪ್ರಮೀಳಾ ಸಂಪ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ. ಕೆ
ಜಳಕದಹೊಳೆ,ಎಸ್. ಡಿ.ಎಂ. ಸಿ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಕುದ್ವ , ಲಯನ್ಸ್ ಕ್ಲಬ್ ನಿಕಟ ಪೂರ್ವಾಧ್ಯಕ್ಷ ಪುರುಷೋತ್ತಮ ದಂಬೆಕೋಡಿ,ಕಾರ್ಯದರ್ಶಿ ವಾಸುದೇವ ಮೇಲ್ಪಾಡಿ, ಕೋಶಾಧಿಕಾರಿ ಆನಂದ ಜಳಕದಹೊಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೇಶವ ಕುದ್ವ ವೇದಿಕೆಗೆ ಆಹ್ವಾನಿಸಿದರು. ಪ್ರಶಾಂತ್ ಮುರುಳ್ಯ ಪ್ರಾರ್ಥಿಸಿದರು.ದಿಲೀಪ್ ಬಾಬ್ಲುಬೆಟ್ಟು ಸ್ವಾಗತಿಸಿದರು.ವಾಸುದೇವ ಮೇಲ್ಪಾಡಿ ವಂದಿಸಿದರು.


ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಗಿಡ ವಿತರಣೆ ಮತ್ತು ಶಾಲಾ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು.ಲಯನ್ಸ್ ಕ್ಲಬ್ ಪದಾಧಿಕಾರಿಗಳು,ಸದಸ್ಯರು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಸಿಬ್ಬಂದಿಗಳು,ಅರಣ್ಯ ಇಲಾಖೆಯವರು ಉಪಸ್ಥಿತರಿದ್ದರು.