ನೂತನ ಸಹಾಯಕ ಆಯುಕ್ತ ಕೆ. ಮಹೇಶಚಂದ್ರ ಅಧಿಕಾರ ಸ್ವೀಕಾರ

0

ಪುತ್ತೂರು ಉಪ ವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಕೆ. ಮಹೇಶಚಂದ್ರ ಸೋಮವಾರ ಅಧಿಕಾರ ಸ್ವೀಕರಿಸಿದರು.
ಕೆ.ಐ.ಎ.ಡಿ.ಬಿ.ಯ ಬೈಕಂಪಾಡಿ ಕಚೇರಿಯಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶಚಂದ್ರ ಕೆ. ಅವರು ಇನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.


ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು, ತೆರವಾದ ಹುದ್ದೆಗೆ ಕೆ. ಮಹೇಶಚಂದ್ರ ಆಗಮಿಸಿದ್ದಾರೆ.