ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಕೆ.ಯವರು ಅರಂತೋಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು . ಗ್ರಾಮ ಪಂಚಾಯಿತಿನ ಘನತ್ಯಾಜ್ಯ ನಿರ್ವಹಣಾ ಘಟಕ, ಸಾರ್ವಜನಿಕ ಸ್ಮಶಾನ, ಕುಡಿಯುವ ನೀರಿನ ಘಟಕ ದಲ್ಲಿ ಅಳವಡಿಸಿರುವ ಸೋಲಾರ್ ಚಾಲಿತ ಪಂಪು, ಜಲಜೀವನ್ ಮಿಷನ್ ಟ್ಯಾಂಕ್ ಮತ್ತು ಕುಡಿಯುವ ನೀರಿನ ನಳಸಂಪರ್ಕ, ಗ್ರಾಮ ಪಂಚಾಯಿತಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಅರಂತೋಡು ಅಂಗನವಾಡಿ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ನ ಅಮೃತ ಉದ್ಯಾನವನದ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿ ಭವಾನಿ ಶಂಕರ್, ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುಂದರ , ಸಹಾಯಕ ಇಂಜಿನಿಯರ್ ಮಣಿಕಂಠ, ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಣಿ ಡಿ ಡಿ ಅವರು ಮತ್ತು ಸದಸ್ಯರಾದ ಶಿವಾನಂದ ಕುಕ್ಕುಂಬಳ, ಕೇಶವ ಅಡ್ತಲೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್. ಉಪಸ್ಥಿತರಿದ್ದರು.