ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯ ಪ್ರಯುಕ್ತ ಕ್ರೀಡಾಕೂಟ

0


ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಜು.23 ರಂದು ನಡೆಯಲಿದ್ದು ಆ
ಪ್ರಯುಕ್ತ ಸಮಾಜ ಬಾಂಧವರಿಗೆ ಕ್ರೀಡಾಕೂಟ ಇಂದು ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಜನಾರ್ದನ ಬಿ.ಕುರುಂಜಿಭಾಗ್ ವಹಿಸಿದ್ದರು. ವೇದಿಕೆಯಲ್ಲಿ ಮರಾಟಿ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜ, ಕಾರ್ಯದರ್ಶಿ ಶ್ರೀಮತಿ ಕುಸುಮ ಜನಾರ್ದನ್, ಮಾತೃ ಸಂಘದ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ,ಕೋಶಾಧಿಕಾರಿ ಭವಾನಿಶಂಕರ ಕಲ್ಮಡ್ಕ, ಕ್ರೀಡಾ ಕಾರ್ಯದರ್ಶಿ ಜನಾರ್ದನ ನಾಯ್ಕ್ ಕೇರ್ಪಳ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಸಮಾಜ ಬಾಂಧವರಿಗೆ ಸಂಘದ ವತಿಯಿಂದ ಧನಸಹಾಯ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕ್ರೀಡಾ ಕಾರ್ಯದರ್ಶಿ ಜನಾರ್ದನ ನಾಯ್ಕ ಕೇರ್ಪಳ ಸ್ವಾಗತಿಸಿ, ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ವಂದಿಸಿದರು, ರಘುನಾಥ ಜಟ್ಟಿಪ್ಪಳ್ಳ ಕಾರ್ಯಕ್ರಮ ನಿರೂಪಿಸಿದರು.