ಜೀವವಿಜ್ಞಾನ ಕಲಿಕೆ ಜೀವನ ಶಿಕ್ಷಣದ ಗಳಿಕೆ :ಡಾ. ಪೂವಪ್ಪ ಕಣಿಯೂರು

0

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಮತ್ತು ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2022-23ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜುಲೈ 14 ಶುಕ್ರವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು.
ಸಾಂಪ್ರದಾಯಿಕ ಶೈಲಿಯಲ್ಲಿ ತುಳಸಿ ಗಿಡದ ಮುಂದೆ ದೀಪ ಉರಿಸುವ ಮೂಲಕ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಪೂವಪ್ಪ ಕಣಿಯೂರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪದವಿಯಲ್ಲಿ ಜೀವವಿಜ್ಞಾನ ಕಲಿಕೆ ಜೀವನ ಪಾಠವನ್ನೂ ಕಲಿಯುವ ಅವಕಾಶ ನೀಡಿದೆ. ಶಿಕ್ಷಣದ ಜೊತೆಗೆ ಜೀವನ ಕಲೆಯನ್ನು ಕಲಿಯುವುದು ಮುಖ್ಯ. ವಿದ್ಯಾರ್ಥಿಗಳು ಹೇಗೆ ಸಂಪತ್ತೀಕರಣಗೊಳ್ಳಬಹುದು, ಗುರುಗಳ ಮಾರ್ಗದರ್ಶನದೊಂದಿಗೆ ನಿಷ್ಟೆ ಶ್ರದ್ದೆಯಿಂದ ತನ್ನೊಳಗಿನ ಶಕ್ತಿಯನ್ನು ಅರಿತುಕೊಂಡು ನಾಯಕರಾಗಲು ಹೇಗೆ ಸಾಧ್ಯ ಎಂಬುದನ್ನು ವಿವರಿಸಿದರು. ನೇಚರ್ ಕ್ಲಬ್ ನ ವಿವಿಧ ಚಟುವಟಿಕೆಗಳ ಜೊತೆಗೆ ಅವರ ಭಾಗವಹಿಸುವಿಕೆಯನ್ನು ನೆನಪಿಸಿಕೊಂಡರು.


ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಉಪಸ್ಥಿತರಿದ್ದು ಬೀಳ್ಕೊಡುವ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ವಹಿಸಿದ್ದರು.


ನೇಚರ್ ಕ್ಲಬ್ ಸದಸ್ಯರಾದ ಪವಿತ್ರಾಕ್ಷಿ, ಯಶಿಕಾ ಮತ್ತು ತಂಡದವರು ಪ್ರಾರ್ಥಿಸಿ, ಕ್ಲಬ್ ನ ಜತೆ ಕಾರ್ಯದರ್ಶಿ ಮಹಿಮಾ ಸ್ವಾಗತಿಸಿದರು. ನೇಚರ್ ಕ್ಲಬ್ ಸಂಯೋಜಕ ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತನಾಡಿ, ಕ್ಲಬ್ ನ ಕಾರ್ಯದರ್ಶಿ ಶ್ರೇಯಾ ವಾರ್ಷಿಕ ವರದಿಯನ್ನು ವಾಚಿಸಿದರು. ಕೋಶಾಧಿಕಾರಿ ಮೊಹಮ್ಮದ್ ಹಾಶಿಮ್ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಉಳಿಕೆಯನ್ನು ಕಿರಿಯ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ಜ್ಯೋತಿ ಮುಖ್ಯ ಅತಿಥಿಗಳನ್ನು ಪರಿಚಯಿಸಿ, ತನುಷ್ ವಂದಿಸಿದರು. ಕೀರ್ತಿಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ಜೀವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ದ್ವಿತೀಯ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳು ವಿವಿಧ ಮನರಂಜನಾ ಸ್ಪರ್ಧೆ ಚಟುವಟಿಕೆಗಳನ್ನು ಆಯೋಜಿಸಿದ್ದರು. ಬೀಳ್ಕೊಡುತ್ತಿರುವ ವಿದ್ಯಾರ್ಥಿಗಳು ಅವರ ಸವಿನೆನಪಿನ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದ ಯಶಸ್ಸಿಗೆ ಉಪನ್ಯಾಸಕರಾದ ಕೃತಿಕಾ, ಭವ್ಯ, ವಿಷ್ಣುಪ್ರಶಾಂತ್ ಮತ್ತು ಅಜಿತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಜಯಂತಿ, ಭವ್ಯ, ಲತಾ, ಗೀತಾ ಮತ್ತು ಪವನ್ ಹಾಗೂ ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು.