ಮಡಪ್ಪಾಡಿ : ಉಚಿತ ಯಕ್ಷಗಾನ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

0

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿಯ ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಉಚಿತವಾಗಿ ನೀಡಲು ಉದ್ದೇಶಿಸಿರುವ ಯಕ್ಷಗಾನ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಶಾಲೆಯಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಚಿನ್ ಬಳ್ಳಡ್ಕ ಇವರು ವಹಿಸಿದ್ದರು.ತರಬೇತುದಾರರಾದ ಶ್ರೀ ಬಾಲಕೃಷ್ಣ ನಾಯರ್ ನೀರಬಿದರೆ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಶಿಕ್ಷಕರಾದ ಜಗದೀಶ್ ನಿರೂಪಿಸಿ ವಂದಿಸಿದರು. ಶಿಕ್ಷಕರಾದ ರಂಜಿತ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮಂಜುಶ್ರೀ ಯಕ್ಷಗಾನ ಕಲಾಸಂಘದ ಕಾರ್ಯದರ್ಶಿಗಳಾದ ತಾರನಾಥ, ಎಸ್‌ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಕುಸುಮಾವತಿ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ವಿಮಲಾ, ಶಿಕ್ಷಕವೃಂದದವರು, ಪೋಷಕರು ಹಾಗೂ ಮಕ್ಕಳು ಹಾಜರಿದ್ದರು.