ಜು.20 : ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

0

ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗಗಳ ಜನ ಸಂಪರ್ಕ ಸಭೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಕುಮಾರಧಾರ ಸಭಾಭವನದಲ್ಲಿ ಜು.20ರಂದು ಬೆಳಗ್ಗೆ 11ರಿಂದ 12ಗಂಟೆ ಯವರೆಗೆ ಆಯೋಜಿಸಲಾಗಿದೆ.

ಮೆಸ್ಕಾಂನ ಹಿರಿಯ ಅಧಿಕಾರಿಗಳು ಸಭೆ ಯಲ್ಲಿ ಭಾಗವಹಿಸಲಿದ್ದಾರೆ. ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಗ್ರಾಹಕರು ದೂರ ವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದು. ಸಂಪರ್ಕ ಸಂಖ್ಯೆ: 08257-200699.