ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ

0

ಸುಳ್ಯ ಸರಕಾರಿ ಪದವ ಪೂರ್ವ ಕಾಲೇಜು ಇಲ್ಲಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.21 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ ಉದ್ಘಾಟಿಸಿ, ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಎಂ.ಬಿ. ಫೌಂಡೇಶನ್ ನ ಅಧ್ಯಕ್ಷರಾದ ಎಂ.ಬಿ. ಸದಾಶಿವ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 44 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಾಧನೆ ಮಾಡಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ ಪ್ರಮಾಣವಚನ ಬೋಧಿಸಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶಿವರಾಮ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ವಿದ್ಯಾರ್ಥಿಗಳಾದ – ಸಾಕ್ಣಿ, ಹಂಸಿನಿ, ಹರ್ಷಿತಾ, ಕಾವ್ಯಶ್ರೀ ಪ್ರಾರ್ಥಿಸಿದರು. ಉಪನ್ಯಾಸಕಿ ಶ್ರೀಮತಿ ಹಸೀನಾಬಾನು ಎಚ್‌ ಇ ವಂದನಾರ್ಪಣೆ ಮಾಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಪೋಷಕ ವರ್ಗದ ಸದಸ್ಯರಾದ ಶ್ರೀಮತಿ ಗಾಯತ್ರಿ ಎನ್.ಸಿ., ಬಸವರಾಜ್ ಕನವಿ, ಶ್ರೀಮತಿ ಸುಶೀಲಾ, ಶ್ರೀಮತಿ ಜಾನಕಿ, ಉಪನ್ಯಾಸಕರಾದ ಕೃಷ್ಣ ಪಿ, ವಿದ್ಯಾರ್ಥಿ ನಾಯಕ ಸೂರ್ಯ, ಉಪನಾಯಕ ಪೃಥ್ವಿ ಕೆ.ಬಿ. ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು.